Don’t Need Divert People And do Politics: ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ: ಸಚಿವ ರಾಮಲಿಂಗಾ ರೆಡ್ಡಿಗೆ ಬಸವರಾಜ ಬೊಮ್ಮಾಯಿ ತಿರುಗೇಟು

ಬೆಂಗಳೂರು: ರಾಜ್ಯದ ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ. ಸಾರಿಗೆ ಇಲಾಖೆಯ ಆದೇಶ ನೋಡಿಯೇ ರಾಜ್ಯದ ಜನತೆಗೆ ಸತ್ಯ ಹೇಳುವ ಕೆಲಸ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರೇ ಶಕ್ತಿ ಯೋಜನೆ ಅಡಿ ರಾಜ್ಯದಲ್ಲಿ ಮಹಿಳೆಯರು ಸಾರಿಗೆ ನಿಗಮದ ಬಸ್ ಗಳಲ್ಲಿ ಜೂನ್ ತಿಂಗಳಲ್ಲಿ 20 ದಿನ ಉಚಿತ ಪ್ರಯಾಣ ಮಾಡಿರುವುದರಿಂದ ನಾಲ್ಕು ಸಾರಿಗೆ ನಿಗಮಗಳಿಗೆ 250 ಕೋಟಿ ರೂ. ವೆಚ್ಚವಾಗಿದ್ದು, ಪ್ರಯಾಣ ವೆಚ್ಚದ ಮರು ಪಾವತಿ ಮಾಡಲು ನಾಲ್ಕೂ ನಿಗಮಗಳಿಗೆ ಆಗಸ್ಟ್ 1 ರಂದು 125 ಕೋಟಿ ಬಿಡುಗಡೆ ಮಾಡಿ ನಿಮ್ಮದೇ ಇಲಾಖೆ ಆದೇಶ ಮಾಡಿದೆ.
ಸಾರಿಗೆ ನಿಗಮಗಳ ಬೇಡಿಕೆಗೂ ಸರ್ಕಾರ ಬಿಡುಗಡೆ ಮಾಡಿರುವ ಅನುದಾನಕ್ಕೂ ಅರ್ಧದಷ್ಟು ಕಡಿಮೆ ಇದ್ದು, ಹೀಗಿರುವಾಗ ಮೊದಲೇ ನಷ್ಟದಲ್ಲಿ ನಡೆಯುತ್ತಿರುವ ಸಾರಿಗೆ ನಿಗಮಗಳಿಗೆ ಸಿಬ್ಬಂದಿ ಸಂಬಳ, ಬಸ್ ಗಳ ನಿರ್ವಹಣೆ, ಡಿಸೇಲ್ ಗೆ ಹಣದ ಕೊರತೆಯಾಗುವುದು ವಾಸ್ತವಿಕ ಸತ್ಯ.
ಆ ಸತ್ಯವನ್ನೇ ನಾನು ರಾಜ್ಯದ ಜನತೆಗೆ ತಿಳಿಸಿದ್ದೇನೆ ಎಂದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

More News

You cannot copy content of this page