ನವದೆಹಲಿ: ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ಸುಪ್ರೀಂಕೋರ್ಟ್ ಇಂದು ಮಧ್ಯಂತರ ತಡೆ ನೀಡಿದೆ.
ಈ ಮಧ್ಯಂತರ ಆದೇಶವನ್ನು ಕಾಂಗ್ರೆಸ್ ಸ್ವಾಗತಿಸಿದ್ದು, ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವು, ಸತ್ಯಮೇವ ಜಯತೆ – ಜೈಹಿಂದ್ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದೆ.
ಹಾಗೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆೆ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ, ನಮಗೆ ನ್ಯಾಯ ಸಿಕ್ಕಿದೆ, ಪ್ರಜಾಪ್ರಭುತ್ವಕ್ಕೆ ಗೆಲುವಾಗಿದ್ದು, ಸಂವಿಧಾನವನ್ನು ಎತ್ತಿಹಿಡಿಯಲಾಗಿದೆ.
Truth Alone Triumphs!
— Mallikarjun Kharge (@kharge) August 4, 2023
We welcome the verdict by the Hon’ble Supreme Court giving relief to Shri @RahulGandhi.
Justice has been delivered. Democracy has won. The Constitution has been upheld.
BJP’s conspiratorial hounding of Shri Gandhi has been thoroughly exposed.
Time for…
ಪ್ರಕರಣದಲ್ಲಿ ಬಿಜೆಪಿ ಪಿತೂರಿ ಸಂಪೂರ್ಣವಾಗಿ ಬಯಲಾಗಿದೆ. ಅವರಿಗೆ ವಿರೋಧ ಪಕ್ಷಗಳ ನಾಯಕರನ್ನು ದುರುದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದು ಟ್ವೀಟ್ ಮಾಡಿದ್ದು, ಹಾಗೆಯೇ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.




