Manipur Violence: ಸುಡುವ ಬಿಸಿಲಿನಲ್ಲಿ ಮೊಣಕಾಲೂರಿ ಪ್ರಾರ್ಥನೆ: ಓ ದೇವರೇ ಹಿಂಸಾಚಾರ ಕೊನೆಗಾಣಿಸು

ಹುಬ್ಬಳ್ಳಿ: ಮಣಿಪುರ ಮತ್ತು ಹರಿಯಾಣ ರಾಜ್ಯಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಹಿಂಸಾಚಾರಗಳನ್ನು ಖಂಡಿಸಿ ಸರ್ವಧರ್ಮಗಳ ಒಕ್ಕೂಟದ ವತಿಯಿಂದ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಕ್ರೈಸ್ತ ಧರ್ಮದ ವತಿಯಿಂದ ಚೆನ್ನಮ್ಮ ವೃತ್ತದಲ್ಲಿ ಮೊಣಕಾಲೂರಿ ಪ್ರಾರ್ಥನೆ ಸಲ್ಲಿಸಿದರು.

https://youtu.be/H77L1Y5zyLQ

ಹೌದು.. ಯೇಸುವಿಗೆ ಕಣ್ಣೀರ ಅಭಿಷೇಕ ಮಾಡಿದ ಕ್ರೈಸ್ತ ಧರ್ಮದ ಸದಸ್ಯರು ನಡೆಯುತ್ತಿರುವ ಹಿಂಸಾಚಾರವನ್ನು ಅಂತ್ಯಗೊಳಿಸು ಎಂದು ಸುಡುವ ಬಿಸಿಲಿನಲ್ಲಿಯೇ ಮೊಣಕಾಲೂರಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೇ ಕಣ್ಣೀರು ಹಾಕುವ ಮೂಲಕ ಪರಿಪರಿಯಾಗಿ ಪ್ರಾರ್ಥನೆ ಸಲ್ಲಿಸಿದರು.

ಮಣಿಪುರ ಹಾಗೂ ಹರಿಯಾಣ ರಾಜ್ಯಗಳಲ್ಲಿ ಹಿಂಸಾಚಾರ ಹಾಗೂ ದೌರ್ಜನ್ಯಗಳು ನಡೆಯುತ್ತಿವೆ. ಇಷ್ಟೊಂದು ಹಿಂಸಾಚಾರ ನಡೆದರಿ ಕೇಂದ್ರ ಸರ್ಕಾರ ಹಾಗೂ ಅಲ್ಲಿನ ರಾಜ್ಯ ಸರ್ಕಾರಗಳು ವಿಫಲವಾಗಿವೆ.‌ ಮಣಿಪುರ ಹಾಗೂ ಹರಿಯಾಣ ರಾಜ್ಯಗಳ ಧಾರ್ಮಿಕ ಕಟ್ಟಡಗಳು ಹಾಗೂ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ಖಂಡನೀಯವಾಗಿದೆ ಎಂದು ದೂರಿದರು.

ಈ ಕೂಡಲೇ ಕೇಂದ್ರ ಸರ್ಕಾರ ಅಲ್ಲಿನ ರಾಜ್ಯಗಳಲ್ಲಿ ನಡೆಯುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

More News