ಬೆಂಗಳೂರು : ಬೆಂಗಳೂರು ಮಹಾನಗರಪಾಲಿಕೆ ಗುತ್ತಿಗೆದಾರರ ಹೋರಾಟ ಮುಂದುವರೆದಿದ್ದು, ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಗುತ್ತಿಗೆದಾರರು, ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಆಗ್ರಹಿಸಿದರು.
ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ತಮ್ಮ ಹೋರಾಟ ನಿರಂತರವಾಗಿ ನಡೆಯಲಿದ್ದು ಅದಕ್ಕೆ ಬೆಂಬಲ ನೀಡಲು ಮನವಿ ಮಾಡಿದರು.
ನಿನ್ನೆ ರಾಜ್ಯಪಾಲರಿಗೆ ದೂರು ನೀಡಿದ್ದ ಗುತ್ತಿಗೆದಾರರು, ಉಪಮುಖ್ಯಮಂತ್ರಿ ಡಿಕೆಶಿ ವಿರುದ್ಧ 15% ಕಮೀಷನ್ ಆರೋಪ ಮಾಡಿದ್ದರು.

ಇದಕ್ಕೆ ಕೂಡಲೇ ಪ್ರತಿಕ್ರಿಯೆ ನೀಡಿದ ಅವರು, ಒತ್ತಡಗಳು ಹೇರಿ ಹಣ ಪಡೆಯಲು ಆಗುವುದಿಲ್ಲ, ಸರಿಯಾಗಿ ಕೆಲಸ ಮಾಡಿದ್ದರೆ ಅವರಿಗೆ ಬಿಲ್ ಸಿಗಲಿದೆ ಎಂದು ಹೇಳಿದ್ದರು.