FARMER’S PROTEST: ಮಹದಾಯಿ ಮತ್ತು ಕಳಸಾ -ಬಂಡೂರಿ ಯೋಜನೆ ಜಾರಿಗೆ ರೈತರ ಪ್ರತಿಭಟನೆ

ಹುಬ್ಬಳ್ಳಿ: ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರ ಮನೆ ಎದುರು ಮಹದಾಯಿ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನೆ ಎದುರು ರೈತರು ಧರಣಿ ಸತ್ಯಾಗ್ರಹ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.


ಡಿಪಿಆರ್ ಸಿದ್ಧವಾಗಿದ್ದರೂ ಇನ್ನೂ ಯೋಜನೆ ಆರಂಭಿಸ,ದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮಹದಾಯಿ ತೊಡಕುಗಳನ್ನ ಸರಿಪಡಿಸಿ ಯೋಜನೆ ಆರಂಭಿಸಬೇಕೆಂದು ಆಗ್ರಹಿಸಿದರು. ಮಹದಾಯಿ ಯೋಜನೆ ಜಾರಿಗೊಳಿಸುವಂತೆ ಘೋಷಣೆ ಕೂಗಿದ ರೈತರು ಶೀಘ್ರದಲ್ಲಿಯೇ ಯೋಜನೆ ಕೈಗೆತ್ತಿಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದರು.

More News