ಬೆಂಗಳೂರು : ಬ್ಲಾಕ್ ಅಂಡ್ ವೈಟ್ ದಂಧೆ ನಡೆಸಲು ನಕಲಿ ನೋಟುಗಳನ್ನ ಬಳಸಿ ವಂಚನೆ ಮಾಡುತ್ತಿದ್ದ ಗ್ಯಾಂಗ್ ವೊಂದನ್ನು ಬಂಧಿಸುವಲ್ಲಿ ಗೋವಿಂದಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣ ಸಂಬಂಧ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ನಿಷೇಧಿತ ಐನೂರು ಮತ್ತು ಒಂದು ಸಾವಿರ ರೂಪಾಯಿ ಮುಖ ಬೆಲೆಯ ನೋಟುಗಳನ್ನು ಜೆರಾಕ್ಸ್ ಮಾಡಿ ವಂಚಿಸಲು ಯತ್ನಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ 6 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ, ಇವರು, ಬ್ಲಾಕ್ ಅಂಡ್ ವೈಟ್ ದಂಧೆ ನಡೆಸಲು ಸಂಚು ರೂಪಿಸಿದ್ದರು. ಹಾಗೆಯೇ ನಿಷೇಧಿತ ನೋಟುಗಳ ಬದಲಾವಣೆ ಮಾಡುತ್ತೇವೆಂದು ಮೋಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

35 ಲಕ್ಷ ನಿಷೇಧಿತ ನೋಟುಗಳನ್ನು ತಂದು ಬ್ಲಾಕ್ ಅಂಡ್ ವೈಟ್ ದಂಧೆ ನಡೆಸಲು ಯತ್ನಿಸುತ್ತಿದ್ದಾಗ ಬಂಧನಕ್ಕೊಳಗಾದ ಆರೋಪಿಸಿಗಳಿಂದ 75 ಲಕ್ಷ ನಿಷೇಧಿತ ಅಸಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದಾಗ, ಕಾಸರಗೋಡಿನಲ್ಲಿ ಬಾಕಿ ಹಣ ಇರುವುದಾಗಿ ತಿಳಿಸಿದ್ದರು. ಕಾಸರಗೋಡಿಗೆ ಹೋದಾಗ 6 ಕೋಟಿ ಜೆರಾಕ್ಸ್ ನೋಟುಗಳು ಪತ್ತೆಯಾಗಿದ್ದು, ಅಲ್ಲದೆ 16 ಮೂಟೆ ಪೇಪರ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೋವಿಂದಪುರ ಪೊಲೀಸರು ತಿಳಿಸಿದ್ದಾರೆ.