ಬೆಂಗಳೂರು: ರೋಹಿಣಿ ಸಿಂಧೂರಿ ದಾಖಲಿಸಿರುವ ಪ್ರಕರಣದಲ್ಲಿ ರೂಪಾ ಮೌದ್ಗಿಲ್ ಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಪ್ರಕರಣ ರದ್ದು ಕೋರಿ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಸಲ್ಲಿಸಿದ್ದ ಅರ್ಜಿಯನ್ನು ಹೈ ಕೋರ್ಟ್ ವಜಾ ಮಾಡಿದೆ.
ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಕಾರಿ ಹೇಳಿಕೆ ಖಂಡಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂದೂರಿ ಡಿ ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಹೀಗಾಗಿ ಕೋರ್ಟ್ ರೂಪಾ ಮೌದ್ಗಿಲ್ ಗೆ ಸಮ್ಮನ್ಸ್ ಜಾರಿ ಮಾಡಿತ್ತು. ಇನ್ನು ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಜಾ ಮಾಡುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಹೈ ಕೋರ್ಟ್ ವಜಾ ಮಾಡಿದೆ.

ನ್ಯಾಯಮೂರ್ತಿ ಸಚಿನ್ ಶಂಕರ್ ಮೊಗದಂ ಅವರ ಪೀಠ ಡಿ. ರೂಪಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪುನ್ನು ನೀಡಿದೆ.
ನಡೆದ ಘಟನೆ ಏನು..?

2023ರ ಫೆ.14 ಮತ್ತು 16ರಂದು ಐಪಿಎಸ್ ಅಧಿಕಾರಿ ಡಿ ರೂಪಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರದ್ದು ಎನ್ನಲಾದ ಕೆಲ ಖಾಸಗಿ ಫೋಟೋ ಜೊತೆಗೆ ಒಂದಷ್ಟು ಮಾನ ಹಾನಿ ಮೆಸೇಜ್ ಹಂಚಿಕೊಂಡಿದ್ದರು. ಇದರಿಂದ ಸಿಟ್ಟಾದ ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ವೈಯಕ್ತಿಕ ತೇಜೋವಧೆ ಜೊತೆಗೆ ಮಾನಸಿಕ ಯಾತನೆ ಉಂಟಾಗುವಂತೆ ಮಾಡಿದ್ದಾರೆಂದು ದೂರಿ ಡಿ ರೂಪಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಜೊತೆಗೆ 1 ಕೋಟಿ ರೂ. ಪರಿಹಾರ ನೀಡಬೇಕೆಂದು ದೂರು ದಾಖಲಿಸಿದ್ದರು.