ಬೆಂಗಳೂರು: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನಲೆಯಲ್ಲಿ ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಿ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅದ್ದೂರಿ ಸ್ವಾಗತ ಕೋರಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಎಚ್ಎಎಲ್ ಏರ್ಪೋರ್ಟ್ನಲ್ಲೇ 5 ರಿಂದ 6 ಸಾವಿರ ಜನರನ್ನು ಸೇರಿಸಲು ಉದ್ದೇಶಿಸಲಾಗಿದೆ. ಏರ್ಪೋರ್ಟ್ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆಯೂ ಇದೆ. ಅಲ್ಲದೇ ಲೋಕ ಸಭಾ ಚುನಾವಣೆ ಹಿನ್ನೆಲೆ ರೋಡ್ ಶೋ ಮಾಡುವ ಸಾಧ್ಯತೆ ಯೂ ಇರುವ ಕಾರಣ ರಾಜ್ಯದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಟ್ರಾಫಿಕ್ ಜಾಮ್ ಉಂಟಾಗದಂತೆ ಕೆಲ ರಸ್ತೆ ಮಾರ್ಗಗಳನ್ನ ಬದಲಿಸಿ ಆದೇಶ ಹೊರಡಿಸಿದೆ.

ಎಲ್ಲೆಲ್ಲಿ ರಸ್ತೆ ಬದಲಾವಣೆ..?
ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ಹಿನ್ನಲೆ ಸಾರ್ವಜನಿಕರಿಗೆ ಸಂಚಾರ ದಟ್ಟಣೆಯಿಂದ ಕಿರಿಕಿರಿ ಆಗ್ಬಾರ್ದು ಎಂಬ ಕಾರಣಕ್ಕೆ ಕೆಲ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೋಲಿಸರ ಮನವಿ ಮಾಡಿದ್ದು, ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ,ಕಬ್ಬನ್ ರಸ್ತೆ ಮತ್ತು ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್) ಸಿವಿ ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್,ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ), ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ)ಗುಬ್ಬಿ ತೋಟದಪ್ಪ ರಸ್ತೆ,
ಜಾಲಹಳ್ಳಿ ಕ್ರಾಸ್ ರಸ್ತೆ ಗಳಲ್ಲಿ ಭಾರೀ ಸರಕು ಸಾಗಾಣಿಕೆ (Heavy Goods Vehicles) ವಾಹನಗಳ ಸಂಚಾರ ನಿರ್ಬಂಧ ಹೇರಲಾಗಿದೆ.

ಅಲ್ಲದೇ ಬೆಂಗಳೂರು ನಗರದೊಳಗೆ ಆಗಸ್ಟ್ 26ರ ಬೆಳಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೂ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ




