ಚಿನ್ನದ ಹುಡುಗ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಬಂಗಾರದ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಹಂಗೇರಿಯ ಬುದಾಪೆಸ್ಟ್ ನಲ್ಲಿ 2023 ರ ಅಥ್ಲೆಟಿಕ್ ವಿಶ್ವ ಚಾಂಪಿಯನ್ ಶಿಪ್ ನಡೆಯುತ್ತಿದೆ. ನಿನ್ನೆ ನಡೆದ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 25 ವರ್ಷದ ನೀರಜ್ ಭಾಗಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಭರ್ಜಿಯನ್ನು 88.17 ದೂರ ಎಸೆಯುವ ಮೂಲಕ ಅತೀ ದೊಡ್ಡ ಎಸೆತದೊಂದಿಗೆ ಚಿನ್ನದ ಪದಕ ಗೆದ್ದು ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದ್ದಾರೆ.
https://fb.watch/mHO3qoBiAl/?mibextid=RUbZ1f
2005ರಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಕಂಚಿನ ಪದಕ ಗೆದ್ದ ನಂತರ 2022ರಲ್ಲಿ ಬೆಳ್ಳಿ ಪದಕ ಜಯಿಸಿದ್ದ ನೀರಜ್, ಈ ಬಾರಿ ಪದಕದ ಬಣ್ಣವನ್ನು ಬದಲಾಯಿಸುವಲ್ಲಿ ಯಶಸ್ವಿಯಾದರು. 88.17 ದೂರ ಭರ್ಜಿ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಪಂದ್ಯದಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ.




