MYSURU DASARA: ನಾದಬ್ರಹ್ಮ ಹಂಸಲೇಖರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ : ಸಿಎಂ

ಮೈಸೂರು :ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಚಾಮುಂಡಿ ಬೆಟ್ಟದಲ್ಲಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಕಾರ್ಡ್ ಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಈ ಬಾರಿಯ ದಸರಾ ವಿಜ್ರಂಭಣೆಯಿಂದ ಆಚರಿಸಲಾಗುವುದು, ಇದಕ್ಕಾಗಿ ಎಲ್ಲಾ ರೀತಿಯ ತಯಾರಿ ಈಗಾಗಲೇ ಆರಂಭಿಸಲಾಗಿದೆ ಎಂದು ಹೇಳಿದರು

. ಗೃಹಲಕ್ಷ್ಮೀ ಯೋಜನೆ ನಾಳೆ ಉದ್ಘಾಟನೆ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಾಳೆ ಗೃಹಲಕ್ಷ್ಮೀ ಯೋಜನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಘಿ ಅವರು ಚಾಲನೆ ನೀಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗೃಹಲಕ್ಷ್ಮೀ ಯೋಜನೆ 1.10 ಕೋಟಿ ಫಲಾನುಭವಿಗಳಿಗೆ ಈ ಯೋಜನೆಯ ಮೂಲಕ ಪ್ರತಿ ತಿಂಗಳ ಎರಡು ಸಾವಿರ ರೂಪಾಯಿ ತಲುಪಲಿದೆ ಎಂದು ತಿಳಿಸಿದ ಸಿಎಂ, ಇದೇ ಸಂದರ್ಭದಲ್ಲಿ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.

ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಕಾಂಗ್ರೆಸ್ ನಿಂದ ಸಾಧ್ಯವಿಲ್ಲ, ಜಾರಿಗೆ ತಂದರೆ ರಾಜ್ಯದ ಬೊಕ್ಕಸ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಆದರೆ, ನಾವು ಅದನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

More News