REVE PARTY FILM STARS ARREST: ರೇವ್ ಪಾರ್ಟಿ ಮಾಡುತ್ತಿದ್ದ ಸೆಲೆಬ್ರೆಟೀಸ್ ಹಾಗೂ ನಿರ್ಮಾಪಕ ಬಂಧನ

ಹೈದರಾಬಾದ್ : ಹೈದರಾಬಾದ್ ನಗರದಲ್ಲಿನ ಐಷಾರಾಮಿ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ನಡೆಸುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ ಎನ್ ಸಿಬಿ ಅಧಿಕಾರಿಗಳು ತೆಲುಗು ಚಿತ್ರ ನಿರ್ಮಾಪಕ ವೆಂಕಟ್ ಸೇರಿದಂತೆ ನಟಿಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎನ್ ಸಿಬಿ ಅಧಿಕಾರಿಗಳು ಬುಧವಾರ ರಾತ್ರಿ ಮಾದಾಪುರದ ವಿಠ್ಠಲ್ ರಾವ್ ನಗರದ ವೈಷ್ಣವಿ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಅಧಿಕಾರಿಗಳು ಕೊಕೇನ್, ಎಲ್ ಎಸ್ ಡಿ ಸೇರಿದಂತೆ ಅಪಾರ ಪ್ರಮಾಣದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ತೆಲುಗಿನ ಮಾಧ್ಯಮಗಳು ವರದಿ ಮಾಡಿವೆ.
ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ನಿರ್ಮಾಪಕ ವೆಂಕಟ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಂದ ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ ಎನ್ನಲಾಗಿದೆ. ಪಾರ್ಟಿಯಲ್ಲಿ ರಾಜಕೀಯ ಮತ್ತು ಸಿನೆಮಾ ರಂಗದ ಗಣ್ಯರ ಮಕ್ಕಳು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದ್ದು, ಅಪಾರ್ಟ್ ಮಂಟ್ ನ ಸಿಸಿಟಿವಿ ದೃಶ್ಯಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

More News