Mekedatu Project Is Only Solution: ಕಾವೇರಿ ನೀರಿನ ಪರಿಹಾರಕ್ಕೆ ಮೇಕೆದಾಟು ಯೋಜನೆ ಒಂದೇ ಪರಿಹಾರ: ಡಿಕೆ ಶಿವಕುಮಾರ್

ನವದೆಹಲಿ: ತಮಿಳುನಾಡಿನ ರೈತರನ್ನು ಗೌರವಿಸುತ್ತೇವೆ. ಆದರೆ ಕರ್ನಾಟಕದಲ್ಲಿ ಅತ್ಯಂತ ಸಂಕಷ್ಟದ ಪರಿಸ್ಥಿತಿ ಇದೆ. ಕಾವೇರಿ ಗದ್ದಲಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಇದರಿಂದ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಇಂದು ಸಮಾಲೋಚನೆ ನಡೆಸಿದರು.

ಕಾವೇರಿ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಕಾವೇರಿ ವಿಚಾರವನ್ನು ನಮ್ಮ ದೆಹಲಿ ಕಾನೂನು ಟೀಮ್ ಜೊತೆ ಸಭೆ ನಡೆಸಿದ್ದೇನೆ. ಪ್ರಾಧಿಕಾರ 5 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶಿದೆ.
ತಮಿಳುನಾಡು 24 ಸಾವಿರ ಕ್ಯೂಸೆಕ್ ಕೇಳಿದರು. ನಾವು 3 ಸಾವಿರ ಕ್ಯೂಸೆಕ್ ಬಿಡಲು ಸಾಧ್ಯ ಎಂದು ಹೇಳಿದ್ದೆವು.
ಇಂದಿನ ಸಭೆಯಲ್ಲಿ ಸಾಧಕ ಭಾದಕಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ರೈತರ ಬಗ್ಗೆ ಕಾಳಜಿ ಇಟ್ಟುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕರ್ನಾಟಕ ಪರ ವಾದ ಮಂಡಿಸುತ್ತಿರುವ ಶ್ಯಾಮ್ ದಿವಾನ್ ಅವರನ್ನು ಭೇಟಿ ಮಾಡ್ತೇವೆ. CWMA ಮತ್ತು CWRC ತಂಡಕ್ಕೆ ವಾಸ್ತವ ಪರಿಸ್ಥಿತಿ ಅಧ್ಯಯನಕ್ಕೆ ಮನವಿ ಮಾಡ್ತೇವೆ.
ಸುಪ್ರೀಂಕೋರ್ಟ್ ನಲ್ಲಿ ಏನು ವಾದ ಮಂಡನೆ ಮಾಡಿದ್ದಾರೆ ಎಂಬ ಬಗ್ಗೆ ಸಲಹೆ ಪಡೆದುಕೊಳ್ಳಲಿದ್ದೇವೆ.‌ ಕಾವೇರಿ ನೀರಿನ ಪರಿಹಾರಕ್ಕೆ ಮೇಕೆದಾಟು ಯೋಜನೆ ಒಂದೇ ಪರಿಹಾರ ಎಂದು ತಿಳಿಸಿದರು.

More News