CLOUD SEEDING: ಮೋಡ ಬಿತ್ತನೆ ಯಶಸ್ಸಿಗೆ ಎಚ್.ಕೆ.ಪಾಟೀಲ ಶುಭ ಹಾರೈಕೆ: ಸಿಎಂ ಮನವರಿಕೆಗೆ ಸಿದ್ಧ

ಹುಬ್ಬಳ್ಳಿ; ವಿಜ್ಞಾನ ಹಾಗೂ ತಂತ್ರಜ್ಞಾನವನ್ನು ನಂಬಿಕೊಂಡು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯುತ್ತಿದೆ. ನಿಜಕ್ಕೂ ವಿಶೇಷ ಕಾರ್ಯಕ್ರಮವಾಗಿದ್ದು, ರೈತರ ಪರವಾಗಿ ಉಚಿತವಾಗಿ ಮಾಡುತ್ತಿರುವ ಕಾರ್ಯ ಯಶಸ್ವಿಯಾಗಿ ನಡೆಯಲಿ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಮೋಡ ಬಿತ್ತನೆ ವಿಮಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಾವೇರಿ ಭಾಗದಲ್ಲಿ ವಿಶೇಷವಾಗಿ ಸಮಸ್ಯೆಗಳನ್ನು ಪರಿಶೀಲನೆ ನಡೆಸಿ ಐದು ಜನ ಶಾಸಕರ ನೇತೃತ್ವದಲ್ಲಿ ಇಂತಹದೊಂದು ಕಾರ್ಯ ನಡೆದಿರುವುದು ವಿಶೇಷವಾಗಿದೆ ಎಂದರು.

ಸಿಎಂ ಸಿದ್ಧರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ಧರಾಮಯ್ಯನವರಿಗೆ ಯಾರು ಮಾಹಿತಿ ನೀಡಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ಸಮಾಲೋಚನೆ ನಡೆಸಿ ಮೋಡ ಬಿತ್ತನೆಯ ಬಗ್ಗೆ ಮನವರಿಕೆ ಮಾಡುವ ಕಾರ್ಯವನ್ನು ಮಾಡುತ್ತೇನೆ ಎಂದು ಅವರು ಹೇಳಿದರು.

ಇನ್ನೂ ಪೈಲೆಟ್ ಜೊತೆಗೆ ಮಾತನಾಡಿದ್ದೇನೆ. ಎಲ್ಲೆಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇದೆಯೋ ಅಲ್ಲಿ ಹಾಗೂ ಫಲವತ್ತಾದ ಮೋಡಗಳಲ್ಲಿ ಮೋಡ ಬಿತ್ತನೆ ಮಾಡುತ್ತೇವೆ ಎಂದಿದ್ದಾರೆ. ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಈ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಇಂತಹದೊಂದು ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹವಾಗಿದೆ ಎಂದು ಶುಭ ಹಾರೈಸಿದರು.

More News