ಬೆಂಗಳೂರು : ಪಡಿತರ ಚೀಟಿ ತಿದ್ದುಪಡಿಗೆ ಸರ್ಕಾರದ ಅನುಮೋದನೆ ನೀಡಿದ್ದು, ಪಡಿತರ ಕಾರ್ಡ್ ಗೆ ಹೆಸರು ಸೇರ್ಪಡೆ ಅಥವಾ ತಿದ್ದುಪಡಿ ಮಾಡಲು ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಸೆಪ್ಟಂಬರ್ 09, 2023 ರಿಂದ ಸೆಪ್ಟಂಬರ್ 11, 2023ರ ವರೆಗೆ ಮೂರು ದಿನಗಳ ಸಮಯಾವಕಾಶ ನೀಡಿ ಆದೇಶ ಹೊರಡಿಸಿದೆ.
ಬೆಳಗಾವಿ ಮತ್ತು ಮೈಸೂರು ಭಾಗದವರು ಸೆಪ್ಟಂಬರ್ 12, 2023 ರಿಂದ ಸೆಪ್ಟಂಬರ್ 14, 2023 ರವರೆಗೆ ಅರ್ಜಿ ಸಲ್ಲಿಸಲು ಕಾಲವಕಾಶ ನೀಡಲಾಗಿದೆ.

ಬೆಳಗಾವಿ ಮತ್ತು ಮೈಸೂರು ಭಾಗವದವರು ಅಂದರೆ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳ ಗ್ರಾಹಕರಿಗೆ ಈ ದಿನಾಂಕ ಅನ್ವಯ ಅರ್ಜಿ ಸಲ್ಲಿಸಬಹುದಾಗಿದೆ.

ಕಲಬುರಗಿ ವಿಭಾಗದವರು ಸೆಪ್ಟಂಬರ್ 06, 2023 ರಿಂದ ಸೆಪ್ಟಂಬರ್ 08, 2023ರ ತನಕ ಅರ್ಜಿ ಸಲ್ಲಿಸಬಹುದಾಗಿದೆ. ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಯ ಗ್ರಾಹಕರು ಈ ದಿನಾಂಕದಂದು ಅರ್ಜಿ ಸಲ್ಲಿಸಬಹುದಾಗಿದೆ.




