ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥ, ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು : ಇಂದು ಬೆಳಗ್ಗೆ ಜಿಮ್ ನಲ್ಲಿ ಕಸರತ್ತು ಮಾಡುತ್ತಿರುವಾಗ ಕುಸಿದು ಬಿದ್ದಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಿರುವ ಅವರು ಐಸಿಯುನಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಕುಟುಂಬ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಆಸ್ಪತ್ರೆಯ ಸುತ್ತಾ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪುನೀತ್ ಅಭಿಮಾನಿಗಳು ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬರಬಹುದು ಎಂಬ ಕಾರಣಕ್ಕೆ ಸೂಕ್ತ ಬಂದೋಬಸ್ತ್ ಮಾಡಲಾಗುತ್ತಿದೆ.

More News