Set Back For Prajwal Revanna: ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಲ್ಲಿ ಹಿನ್ನಡೆ: ರಾಜಕೀಯವಾಗಿ ನಾಶ ಮಾಡ್ತೇನೆ ಎಂದ ದೂರುದಾರ

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಲು ಹೈಕೋರ್ಟ್ ನಿರಾಕರಿಸಿದೆ. ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು
ಸಲ್ಲಿಸಿದ್ದ ಅರ್ಜಿಯನ್ನ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್​, ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಚುನಾವಣೆ ವೇಳೆ ಪ್ರಮಾಣಪತ್ರ ಸಲ್ಲಿಸುವಾಗ ಹಲವು ಆಸ್ತಿಗಳ ಮಾಹಿತಿ ಮುಚ್ಚಿಟ್ಟಿದ್ದಾರೆ. ಅಷ್ಟೇ ಅಲ್ಲದೇ, ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ, ಶಾಸಕ ಎ.ಮಂಜು ಹಾಗೂ ವಕೀಲ ದೇವರಾಜೇಗೌಡ ದೂರನ್ನು ಸಲ್ಲಿಸಿದ್ದರು.
ಚುನಾವಣಾ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಪ್ರಜ್ವಲ್ ಗೆ ಶಾಕ್ ನೀಡಿದೆ.

“ತಡೆಯಾಜ್ಞೆ ಸಿಗುವವರೆಗೂ ಅಧಿವೇಶನದಲ್ಲಿ ಭಾಗಿಯಾಗುವಂತಿಲ್ಲ”

ಈ ಕುರಿತು ಹಾಸನದಲ್ಲಿ ಮಾತನಾಡಿದ ದೂರುದಾರ, ವಕೀಲ ದೇವರಾಜೇಗೌಡ, ಹೈ ಕೋರ್ಟ್ ತೀರ್ಪು ನೀಡಿದ ದಿನವೇ ಪ್ರಜ್ವಲ್ ಅರ್ಜಿ ಸಲ್ಲಿಸಬೇಕಿತ್ತು. ತಾಂತ್ರಿಕ ಕಾರಣ ನೀಡಿ ಪ್ರಜ್ವಲ್ 4 ದಿನ ತಡವಾಗಿ ಅರ್ಜಿ ಹಾಕಿದ್ದರು. ಪ್ರಜ್ವಲ್ ಸದಸ್ಯತ್ವ ಅನರ್ಹಗೊಳಿಸುವಂತೆ ಎ.ಮಂಜು ಅರ್ಜಿ ಹಾಕಿದ್ದರು. ಇದು ಸತ್ಯಕ್ಕೆ ಸಿಕ್ಕ ಜಯ. ತಡೆಯಾಜ್ಞೆ ಸಿಗುವವರೆಗೂ ಅಧಿವೇಶನದಲ್ಲಿ ಭಾಗಿಯಾಗುವಂತಿಲ್ಲ. ಈಗಾಗಲೇ ಸುಪ್ರೀಂಕೋರ್ಟ್​​ನಲ್ಲಿ ಕೇವಿಯೆಟ್ ಫೈಲ್ ಮಾಡಿದ್ದೇನೆ. ನನ್ನ ವಿರುದ್ಧ ಮಾತನಾಡಲು ಒಬ್ಬ ಮಹಿಳೆಯನ್ನು ತಂದು ನಿಲ್ಲಿಸಿದ್ದಾರೆ. ಯಾವುದೇ ಅಡ್ಡದಾರಿಯಲ್ಲಿ ಹೋದರೂ ನಾನು ರಾಜಿಯಾಗಲ್ಲ. ರಾಜಕೀಯವಾಗಿ ಮುಗಿಸುತ್ತೇನೆ ಎಂದು ಸವಾಲು ಹಾಕಿದರು.

ಮುಂದುವರೆದು ದೂರಿದ ಅವರು, ಪ್ರಜ್ವಲ್ ಅಕ್ರಮವಾಗಿ ಸರ್ಕಾರಿ ಜಮೀನು ಖರೀದಿಸಿದ್ದಾರೆ. ಹೊಳೆನರಸೀಪುರದ ಚೆನ್ನಾಂಬಿಕ ಕನ್ವೆನ್‌ಷನ್ ಸೆಂಟರ್ ಕಟ್ಟಡ ಕನಿಷ್ಟ 5 ಕೋಟಿ ರೂ. ಬೆಲೆ ಬಾಳುತ್ತದೆ ಆದರೆ ಮೌಲ್ಯವನ್ನು 14 ಲಕ್ಷ ರೂ. ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಕೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂಪಾಯಿ ಹಣ ಹೊಂದಿದ್ದರೂ ಅಲ್ಲಿ ಕೇವಲ 5 ಲಕ್ಷ ರೂ ಇದೆ ಎಂದು ತೋರಿಸಿದ್ದಾರೆ. ತೆರಿಗೆ ವಿವರಗಳ ಬಗ್ಗೆಯೂ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿದ್ದಾರೆ.

More News