ತಂದೆ ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು : ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲು ಸರ್ಕಾರ ತೀರ್ಮಾನಿಸಿದೆ.  

ನಗರದ ವಿಕ್ರಂ ಆಸ್ಪತ್ರೆಯಿಂದ ಪಾರ್ಥೀವ ಶರೀರವನ್ನು ಸದಾಶಿವನಗರದಲ್ಲಿರುವ ಪುನೀತ್ ರಾಜ್ ಕುಮಾರ್ ಅವರ ಮನೆಗೆ ಕೊಂಡೊಯ್ಯಲಾಗಿದೆ. ಅಲ್ಲಿ ಎಲ್ಲಾ ರೀತಿಯ ವಿಧಿ ವಿಧಾನಗಳನ್ನು ಮುಗಿಸಿ, ಕಂಠೀರವ ಒಳಾಂಗಣಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.  

ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಸಲು ರಾಜ್ಯ ಸರ್ಕಾರ ಮತ್ತು ರಾಜ್ ಕುಟುಂಬ ತೀರ್ಮಾನಿಸಿದೆ. ತಂದೆ ವರನಟ ಡಾ.  ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಯುತ್ತಿದೆ ಎನ್ನಲಾಗಿದೆ. ಅಣ್ಣಾವ್ರ ಸಮಾಧಿ ಪಕ್ಕದಲ್ಲಿಯೇ ರೆಬಲ್ ಸ್ಟಾರ್ ಅಂಬರೀಷ್ ಅವರ ಸಮಾಧಿಯು ಇದೆ.

ಈ ಎಲ್ಲಾ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರವೇ ನಡೆಸುತ್ತಿರುವ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಪುನೀತ್ ಅವರ ಅಭಿಮಾನಿಗಳು ಅಂತಿಮ ದರ್ಶನಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

More News