EVERYTHING FOR SALE IN BJP..? ವಿರೋಧ ಪಕ್ಷದ ನಾಯಕ”ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ..?

ಬೆಂಗಳೂರು : ಉದ್ಯಮಿಯೊಬ್ಬರಿಗೆ ಬಿಜೆಪಿ ವಿಧಾನಸಭೆಯ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಹಿಂದೂಪರ ಭಾಷಣಕಾರ್ತಿ ಚೈತ್ರಾ ಕುಂದಾಪುರ ಬಂಧನದ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್ ಮಾಡಿ ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ ಎಂದು ಪ್ರಶ್ನಿಸಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚೈತ್ರಾ ಕುಂದಾಪುರ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಆದರೆ, ಚೈತ್ರಾ ಮಾತ್ರ ಈ ಪ್ರಕರಣದಲ್ಲಿ ಭಾಗಿಯಾಗಿರುವ ಸ್ವಾಮೀಜಿಯೊಬ್ಬರ ಬಂಧನವಾದ ಬಳಿಕ ಸ್ಪೋಟಕ ಮಾಹಿತಿ ಹೊರಬೀಳಲಿದೆ ಎಂದು ಹೇಳಿದ್ದಾರೆ.

https://x.com/INCKarnataka/status/1701922464237052154?s=20

ಇದರ ನಡುವೆ ಕಾಂಗ್ರೆಸ್ ಟ್ವೀಟ್, ಬಿಜೆಪಿಗೆ ಮತ್ತಷ್ಟು ಇರುಸುಮುರುಸುವನ್ನುಂಟು ಮಾಡಿದೆ. ಟ್ವೀಟ್ ಸಾರಾಂಶ ಹೀಗಿದೆ.
ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ?
ಸಿಎಂ ಹುದ್ದೆಗೆ 2,500 ಕೋಟಿ,
ಮಂತ್ರಿಗಿರಿಗೆ 70 – 80 ಕೋಟಿ,
MLA ಟಿಕೆಟ್ ಗೆ 7 ಕೋಟಿ!!
ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು.
ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ!
ಈ ಮಾರಾಟದ ಆಟದಲ್ಲಿ “ವಿರೋಧ ಪಕ್ಷದ ನಾಯಕ”ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ ?@BJP4Karnataka ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

More News