FILM ACTOR’S ON CAUVERY WATER DISPUTE: ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ: ರಾಜ್ಯಕ್ಕೆ ನ್ಯಾಯ ಸಿಗುವಂತಾಗಲಿ: ಸಿನೆಮಾ ನಟರ ಕಾವೇರಿ ನದಿ ನೀರಿಗಾಗಿ ಟ್ವೀಟ್

ಬೆಂಗಳೂರು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಸಿನೆಮಾ ನಟ-ನಟಿಯರು ಹೋರಾಟಕ್ಕೆ ಧುಮಕಬೇಕು ಎಂದು ಆಗ್ರಹಿಸಿದ ಬೆನ್ನಲ್ಲೆ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ತಮ್ಮ ಟ್ವೀಟರ್ ಖಾತೆಯಲ್ಲಿ ಹೋರಾಟ ಆರಂಭಿಸಿದ್ದು, ಆದಷ್ಟು ಬೇಗನೇ ರಾಜ್ಯಕ್ಕೆ ನ್ಯಾಯ ಸಿಗಲಿ ಎಂದು ಒತ್ತಾಯಿಸಿದ್ದಾರೆ.
ಕಿಚ್ಚ ಸುದೀಪ್ ನೆಲ- ಜಲ ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯ.ಇದೆ ಎಂದು ಹೇಳುವುದರ ಮೂಲಕ ತಮ್ಮ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಕರ್ನಾಟಕದ ಪಾಲಿನ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರಲವಾಗಿ ನಡೆದುಕೊಂಡು ಬಂದಿದೆ ಎಂದು ದರ್ಶನ್ ಪರೋಕ್ಷವಾಗಿ ತಮಿಳುನಾಡು ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಟ ಕಿಚ್ಚ ಸುದೀಪ್ ಅವರ ಟ್ವೀಟ್ ನ ಪೂರ್ಣ ವಿವರ ಇಲ್ಲಿದೆ.

https://x.com/KicchaSudeep/status/1704440438655275020?t=A1Zq4kuYCH9BPrGALT1dTg&s=08

ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ.
ಹಾಗೆಯೇ ದರ್ಶನ್ ತೂಗುದೀಪ ಅವರ ಟ್ವೀಟ್ ನ ಪೂರ್ಣ ವಿವರ ಇಲ್ಲಿದೆ.

ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ.

More News