ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನ ಕೂಡಲೇ ಬಂಧಿಸುತ್ತೇವೆ : ಪ್ರವೀಣ್ ಸೂದ್

ಮೈಸೂರು: ಗ್ಯಾಂಗ್ ರೇಪ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದರು.  ಪ್ರಕರಣ ನಡೆಯಬಾರದಿತ್ತು, ನಡೆದು ಹೋಗಿದೆ. ಇದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದರಿಂದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರವೀಣ್ ಸೂದ್ ತಿಳಿಸಿದರು.

ಯಾರ ಮೇಲೆ ದೌರ್ಜನ್ಯ ನಡೆದರೂ ಅವರು ಸುಧಾರಿಸಿಕೊಳ್ಳಬೇಕು. ಸುಧಾರಿಸಿಕೊಂಡ ನಂತರ ಹೇಳಿಕೆ ಪಡೆಯಲಾಗುತ್ತದೆ. ಭದ್ರತೆ ದೃಷ್ಠಿಯಿಂದ ಎಲ್ಲಾ ವಿಚಾರ ಬಹಿರಂಗ ಪಡಿಸಲು ಆಗಲ್ಲ ಎಂದು ಪ್ರವೀಣ್ ಸೂದ್ ಹೇಳಿದರು.

ನಾಲ್ಕೇ ದಿನದಲ್ಲಿ ಶೂಟೌಟ್ ಪ್ರಕರಣದ ಆರೋಪಿಗಳ ಬಂಧನ:

ಮೈಸೂರಿನಲ್ಲಿ‌ ದರೋಡೆ ಮತ್ತು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು. ಆಗಸ್ಟ್ 23 ರಂದು ಮೈಸೂರಿನಲ್ಲಿ‌ ದರೋಡೆ ಮತ್ತು ಶೂಟೌಟ್  ಪ್ರಕರಣ ನಡೆದಿತ್ತು.

ಮೈಸೂರು ಪೋಲಿಸ್ ಆಯುಕ್ತರು ಐದು ವಿಶೇಷ ತಂಡಗಳನ್ನು ರಚಿಸಿ ದೇಶದ ಬೇರೆ ಬೇರೆ ಭಾಗಕ್ಕೆ ಕಳುಹಿಸಿದ್ದರು. ಇಬ್ಬರು ಕಿಂಗ್ ಪಿನ್ ಗಳನ್ನು ಬಂಧಿಸಲಾಗಿದೆ. ಮೈಸೂರು ಹಾಗೂ ರಾಜಸ್ತಾನದ ಇಬ್ಬರನ್ನು ಬಂಧಿಸಲಾಗಿದೆ. ದರೋಡೆ, ಕೊಲೆ ಮಾಡಿದವರು ಪೈಕಿ ಇಬ್ಬರು ಪಶ್ಚಿಮ ಬಂಗಾಳದವರು. ಮುಂಬೈನಲ್ಲಿ ಒಬ್ಬ ಮತ್ತು ಜಮ್ಮು ಕಾಶ್ಮೀರದಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಇನ್ನಿಬ್ಬರ ಬಂಧನ ಆಗಬೇಕಿದೆ, ಇವರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

More News

You cannot copy content of this page