HIT AND RUN-YOUTH DEATH: ಯುವಕನಿಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರಿನ ಚಾಲಕ: ಸ್ಥಳದಲ್ಲೇ ಯುವಕ ಸಾವು

ಬೆಂಗಳೂರು : ಬೆಂಗಳೂರಿನ ಬಾಗಲೂರು ಮುಖ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಯುವಕನೊಬ್ಬನಿಗೆ ಕಾರು ಡಿಕ್ಕಿ ಹೊಡೆದು, ಅದೇ ರಭಸಕ್ಕೆ ಚಾಲಕ ಕಾರು ಚಲಾಯಿಸಿ ಪರಾರಿಯಾದ ಘಟನೆ ರಾತ್ರಿ ನಡೆದಿದೆ.

ಕಾರು ಢಿಕ್ಕಿ ಹೊಡೆದ ರಭಸಕ್ಕೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ದೂರು ದಾಖಲಿಸಿ ತನಿಖೆಕೈಗೊಂಡಿರುವ ಹೆಣ್ಣೂರು ಪೊಲೀಸರು ತಿಳಿಸಿದ್ದಾರೆ.
ಮೂವರು ಯುವಕ ಗುಂಪು ರಸ್ತೆ ದಾಟುತ್ತಿದ್ದಾಗ ಓರ್ವನಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಯುವಕ ಸುಮಾರು ಐದು ಅಡಿ ಎತ್ತರ ಹಾರಿ ರಸ್ತೆಗೆ ಬಿದ್ದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಹಿಟ್ ಆ್ಯಂಡ್ ರನ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೂರು ದಾಖಲಿಸಿ ತನಿಖೆ ಕೈಗೊಂಡಿರುವ ಹೆಣ್ಣೂರು ಸಂಚಾರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

More News