ಬೆಂಗಳೂರು: ಕ್ರಿಕೆಟ್ ಲೋಕದಲ್ಲಿ “ಹಿಟ್ ಮ್ಯಾನ್” ಎಂದೇ ಖ್ಯಾತಿ ಪಡೆದಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550ನೇ ಸಿಕ್ಸ್ ಬಾರಿಸುವ ಮೂಲಕ ಎಲೈಟ್ ಕ್ಲಬ್ ಸೇರಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ರಾಜ್ಕೋಟ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್, 81 ರನ್‌ಗಳಿಸಿ ಆಕರ್ಷಕ ಅರ್ಧಶತಕ ದಾಖಲಿಸಿದರು. ತಮ್ಮ ಈ ಇನ್ನಿಂಗ್ಸ್‌ನಲ್ಲಿ ಭರ್ಜರಿ 6 ಸಿಕ್ಸ್‌ಗಳನ್ನ ಬಾರಿಸಿದ ಹಿಟ್‌ಮ್ಯಾನ್ ಆ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 551ನೇ ಸಿಕ್ಸ್ ಕಲೆಹಾಕುವಲ್ಲಿ ಯಶಸ್ವಿಯಾದರು.

ಇದರೊಂದಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಸಿಕ್ಸ್‌ಗಳನ್ನ ಬಾರಿಸಿದ ಆಟಗಾರರ ಲಿಸ್ಟ್‌ನಲ್ಲಿ ಮಾಜಿ ಕ್ರಿಕೆಟಿಗ ಕ್ರಿಸ್ ಗೇಯ್ಲ್ ಜೊತೆಗೂಡಿದರು. ತಮ್ಮ ಸ್ಪೋಟಕ ಬ್ಯಾಟಿಂಗ್‌ನಿಂದಲೇ ವಿಶ್ವ ಕ್ರಿಕೆಟ್‌ನಲ್ಲಿ ಮಿಂಚಿದ್ದ ವೆಸ್ಟ್ ಇಂಡೀಸ್‌ನ ದೈತ್ಯ ಬ್ಯಾಟರ್ ಕ್ರಿಸ್ ಗೇಯ್ಲ್, ಅಂತಾರಾಷ್ಟ್ರೀಯ ಕ್ರಿಕೆಟ್ ಪಯಣದಲ್ಲಿ ಒಟ್ಟು 553 ಸಿಕ್ಸ್‌ಗಳನ್ನ ಸಿಡಿಸಿ ಮಿಂಚಿದ್ದರು. ಇದೀಗ ಆಸೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆರು ಸಿಕ್ಸ್‌ಗಳನ್ನ ಬಾರಿಸಿದ ರೋಹಿತ್, 551 ಸಿಕ್ಸ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದು, ಗೇಯ್ಲ್ ದಾಖಲೆ ಮುರಿಯುವ ಎಲ್ಲಾ ಅವಕಾಶ ಹೊಂದಿದ್ದಾರೆ.

ಉಳಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಸಿಕ್ಸ್‌ಗಳನ್ನ ಬಾರಿಸಿರುವ ಬ್ಯಾಟ್ಸ್‌ಮನ್‌ಗಳ ಲಿಸ್ಟ್‌ನಲ್ಲಿ ಪಾಕಿಸ್ತಾನದ ಮಾಜಿ ಆಟಗಾರ ಶಾಹೀದ್ ಅಫ್ರಿದಿ(476 ಸಿಕ್ಸ್), ನ್ಯೂಜಿ಼ಲೆಂಡ್‌ನ ಮಾಜಿ ಆಟಗಾರ ಬ್ರೆಂಡನ್ ಮೆಕ್ಕಲಂ(398 ಸಿಕ್ಸ್) ಹಾಗೂ ನ್ಯೂಜಿ಼ಲೆಂಡ್‌ನ ಆರಂಭಿಕ ಬ್ಯಾಟರ್ ಮಾರ್ಟಿನ್ ಗಪ್ಟಿಲ್(383 ಸಿಕ್ಸ್) ಟಾಪ್-5 ಸ್ಥಾನದಲ್ಲಿದ್ದಾರೆ.




