ಬೆಂಗಳೂರು : ನಗರದ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ ಮತ್ತು ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ನಡೆದಿದ್ದ ದಾಳಿ ವಿಚಾರವಾಗಿ ನಡೆದ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.
ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ನಡೆದ ದಾಳಿ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ಮುಂದಾಗಿದ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗೋಲಿಬಾರ್ ನಡೆಸಿದ್ದರು.
ಅಂದು ನಕಲಿ ಎನ್ಕೌಂಟರ್ ಎಂದು ಮೃತ ಆರೋಪಿಗಳ ಕುಟುಂಬ ಆರೋಪಿಸಿತ್ತು. ಘಟನೆಯ ಹಿಂದೆ ಅಂದಿನ ರಾಜ್ಯ ಸರ್ಕಾರದ ಕೈವಾಡದವಿದೆ ಎಂದು ಕಾಂಗ್ರೆಸ್ ಶಂಕೆ ವ್ಯಕ್ತಪಡಿಸಿತ್ತು. ಹೀಗಾಗಿ ಮ್ಯಾಜಿಸ್ಟ್ರೇಟ್ ತನಿಖೆಗೆ ಈ ಪ್ರಕರಣವನ್ನು ಅಂದಿನ ಬಿಜೆಪಿ ಸರ್ಕಾರ ವಹಿಸಿತ್ತು.

ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದ ಮ್ಯಾಜಿಸ್ಟ್ರೇಟ್ ಅವರು ಬಿಜೆಪಿ ಸರ್ಕಾರದ ಕೊನೆಯ ಅವಧಿಯಲ್ಲಿ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದ್ದರು. ಪೊಲೀಸರ ಗೋಲಿಬಾರ್ ಕ್ರಮ ಸರಿಯಿದೆ ಎಂದು ವರದಿ ನೀಡಿದ್ದ ಜಿಲ್ಲಾಧಿಕಾರಿ, ಅಂದು ಪೋಲಿಸರು ಗೋಲಿಬಾರ್ ಮಾಡದಿದ್ದರೆ ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತಿದ್ದರು ಎಂದು ವರದಿಯಲ್ಲಿ ಹೇಳಲಾಗಿತ್ತು.

ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಕಾಪಾಡಲು ಗೋಲಿಬಾರ್ ನಡೆದಿದೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು. 2023ರ ಜನವರಿ ತಿಂಗಳಲ್ಲಿ ವರದಿ ನೀಡಿದ್ದ ಮ್ಯಾಜಿಸ್ಟ್ರೇಟ್, ಈ ಮ್ಯಾಜಿಸ್ಟ್ರೇಟ್ ವರದಿಯನ್ನು ಕಾಂಗ್ರೆಸ್ ಸರ್ಕಾರ ಟೀಕಿಸಿತ್ತು.
ಚುನಾವಣಾ ಸಮಯದಲ್ಲಿ ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡಿವೆ ಎಂದು ಕಾಂಗ್ರೆಸ್ ಟೀಕಿಸಿತ್ತು. ಅಧಿಕಾರಕ್ಕೆ ಬಂದ ಬಳಿಕ ರಿಪೋರ್ಟ್ ಅನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಒಪ್ಪಿಕೊಂಡಿದೆ. ಬಿಜೆಪಿ ಸರ್ಕಾರದ ಕ್ಯಾಬಿನೆಟ್ ನಿರ್ಧಾರವನ್ನು ಒಪ್ಪಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.




