OPERATION HASTHA: ಆಪರೇಷನ್ ಹಸ್ತ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ

ಗದಗ: ಬಿಜೆಪಿಯ ಕೆಲವು ನಾಯಕರ ಧೋರಣೆಗೆ ಬೇಸತ್ತು ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದರು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರು. ಈ ಸೇಡು ತೀರಿಸುವ ಉದ್ದೇಶದಿಂದ ಅವರ ನೇತೃತ್ವದಲ್ಲಿ ಬಿಜೆಪಿಯ ವಿಕೆಟ್ ಶೀಘ್ರದಲ್ಲೇ ಪತನಗೊಳ್ಳಲಿದೆ.
ಮಾಜಿ ಶಾಸಕ, ಹಾಗೂ ಗದಗ ಜಿಲ್ಲೆಯ ಮುಖಂಡ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಲಿದ್ದು, ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗದಗ ಜಿಲ್ಲೆಯ ಕುಂದ್ರಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ರಾಮಣ್ಣ ಲಮಾಣಿ, ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಅಕ್ಟೋಬರ್ 10ರಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಕುರಿತು ಈಗಾಗಲೇ ಜಗದೀಶ್ ಶೆಟ್ಟರ್ ಅವರ ಮೂಲಕ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಮಾತುಕತೆ ಫಲಪ್ರದವಾಗಿರುವ ಹಿನ್ನೆಲೆಯಲ್ಲಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬಿಜೆಪಿಯಿಂದ ಎರಡು ಬಾರಿ ಶಾಸಕನಾಗಿರುವ ತಮಗೆ ಮೂರನೇ ಬಾರಿ ಟಿಕೇಟ್ ನೀಡುವ ಸಂದರ್ಭದಲ್ಲಿ ಕೈಬಿಟ್ಟಿದ್ದಾರೆ ಎಂದು ಆರೋಪಿಸಿದ ಅವರು, ಚುನಾವಣೆಗಾಗಿ ನಾನು ಎಲ್ಲಾ ರೀತಿಯಲ್ಲೂ ರೆಡಿಯಾಗಿದ್ದೇ, ಹಾಗೂ ಸಾಕಷ್ಟು ಹಣವನ್ನು ಖರ್ಚು ಮಾಡಿದ್ದೇ. ಆದರೆ, ಕೆಲವರ ಷಡ್ಯಂತ್ರದಿಂದ ನನಗೆ ಟಿಕೇಟ್ ತಪ್ಪಿದೆ ಎಂದು ತಮ್ಮ ಬೇಸರ ವ್ಯಕ್ತಪಡಿಸಿದರು.

More News