ಬೆಂಗಳೂರು: ಕಾವೇರಿ ನೀರಿನ ಹೋರಾಟದ ಮಧ್ಯೆ ಹುಟ್ಟುಹಬ್ಬ ಆಚರಿಸೋದು ಸರಿಯಲ್ಲ ಎಂದೆನಿಸಿ ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ತಮ್ಮ ಬರ್ತ್‌ಡೇ ಆಚರಣೆಯನ್ನು ಕ್ಯಾನ್ಸಲ್ ಮಾಡಿದ್ದಾರೆ.
ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ.
ಅಕ್ಟೋಬರ್ 3ರಂದು ರಚಿತಾ ರಾಮ್ ಹುಟ್ಟುಹಬ್ಬ. ಅಂದು ನಟಿಯನ್ನ ಹತ್ತಿದಿಂದ ಕಂಡು ಖುಷಿ ಪಡಲು ಕಾಯ್ತಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ಎಲ್ಲರಿಗೂ ನಮಸ್ಕಾರ, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳಿಂದ ಈ ವರ್ಷ ನನ್ನ ಜನ್ಮದಿನವನ್ನು ಆಚರಿಸುವುದು ಸೂಕ್ತವಲ್ಲ ಎನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನನ್ನ ಅಭಿಮಾನಿಗಳು ನನ್ನ ಮನೆಯ ಹತ್ತಿರ ಬರಬೇಡಿ ಎಂದು ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ನನ್ನೊಂದಿಗೆ ಸದಾ ಇರಲಿ ಎಂದು ಹೇಳಿದ್ದಾರೆ.
ಕಾವೇರಿ ನೀರಿನ ವಿಚಾರದ ಗದ್ದಲಕ್ಕಾಗಿ ನಟಿ ತಮ್ಮ ಹುಟ್ಟು ಹಬ್ಬದ ಆಚರಣೆಯನ್ನ ಕ್ಯಾನ್ಸಲ್ ಮಾಡಿದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಿನ್ನ ಭಿನ್ನವಾದ ಚರ್ಚೆ ಶುರುವಿಟ್ಟಿದೆ.




