ಬೆಂಗಳೂರು : ಕಾವೇರಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದ್ದು, ಎರಡು ಬಂದ್ ಬಳಿಕ ನಾಳೆ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿವೆ.
ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ KRS ಡ್ಯಾಂ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಿಂದ ಬೃಹತ್ ರ್ಯಾಲಿ ಮೂಲಕ KRS ಡ್ಯಾಂ ತಲುಪಲಿರವ ಕನ್ನಡಪರ ಸಂಘಟನೆಗಳು ಅಲ್ಲಿ ಮುತ್ತಿಗೆ ಹಾಗೂ ಪ್ರತಿಭಟನೆ ನಡೆಸಲಿವೆ.
ನಾಳೆ ಬೆಳಗ್ಗೆ 11:30 ಕ್ಕೆ ಬೆಂಗಳೂರಿನಿಂದ ರ್ಯಾಲಿ ಹೊರಡಲಿದೆ. ವಾಟಾಳ್ ನೇತೃತ್ವದ ಕನ್ನಡಪರ ಸಂಘಟನೆ ಕಾರ್ಯಕರ್ತರು ನೂರಾರು ವಾಹನಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. KRSಡ್ಯಾಂ ವರೆಗೂ ರ್ಯಾಲಿ ನಡೆಸಿದ ಬಳಿಕ ಮುತ್ತಿಗೆ ಹಾಕಲಿದ್ದೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡದಂತೆ ಎಚ್ಚರಿಕೆ ನೀಡಲಿರುವ ಕನ್ನಡಪರ ಸಂಘಟನೆಗಳು, ಮುತ್ತಿಗೆ ಹಾಕುವ ಮೂಲಕ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಎಚ್ಚರಿಕೆ ನೀಡಲಿವೆ.




