ಬೆಂಗಳೂರು: ಏಕಕಾಲಕ್ಕೆ ನೂರು ಕಡೆಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ರಾತ್ರಿ ಏಕಾಏಕಿ ಚಿಕ್ಕಪೇಟೆ ಹಾಗೂ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯ್ತು.
ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನಿನ್ನೆ ತಡರಾತ್ರಿ ಚಿಕ್ಕಪೇಟೆ ಮತ್ತು ಸುತ್ತಮುತ್ತಲಿನ ಅಂಗಡಿ ಮುಂಗಟ್ಟು ಸೇರಿದಂತೆ ನೂರು ಕಡೆಗಳಲ್ಲಿ ಏಕಕಾಲಕ್ಕೆ ಮೆಗಾ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಟೆಕ್ಸ್ ಟೈಲ್ಸ್ ವ್ಯಾಪಾರಿಗಳು, ರೆಡಿಮೇಡ್ ಗಾರ್ಮೆಂಟ್ಸ್, ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಗಳು ಹಾಗೂ ಗೋಡೌನ್ ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಲೆಕ್ಕಕ್ಕೆ ಸಿಗದ ಹಲವು ವಸ್ತುಗಳನ್ನು ಗೋಡೌನ್ಗಳಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ.
ವಾಣಿಜ್ಯ ತೆರಿಗೆ ಪಾವತಿ ವಂಚನೆ ಬಗ್ಗೆ ದಾಖಲೆಗಳ ಪರಿಶೀಲನೆ ವೇಳೆ ಲೆಕ್ಕಕ್ಕೆ ಸಿಗದ ಹಲವು ವಸ್ತುಗಳು ಸ್ಟಾಕ್ ಮಾಡಿರುವುದು ಬೆಳಕಿಗೆ ಬಂದಿದೆ. ತೆರಿಗೆ ಪಾವತಿ ಮಾಡದೇ ಗೋಡೌನ್ ನಲ್ಲಿದ್ದ ವಸ್ತುಗಳ ಮಾರಾಟ ಕ್ಕೆ ಇಟ್ಟ ವಸ್ತು ಗಳ ಪರಿಶೀಲನೆ ನಡೆಸಿ, ಜಿಎಸ್ ಟಿ ನಿಯಮಾವಳಿ ಪ್ರಕಾರ ಅಂತಹ ಗೋಡೌನ್ ಮತ್ತು ಅಂಗಡಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದರು.




