ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಸಂತಸದ ಸುದ್ದಿ ನೀಡಿದೆ. ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದ ಆಹಾರ ಇಲಾಖೆ, ಅ.5 ರಿಂದ 13 ರವರೆಗಗೂ ತಿದ್ದುಪಡಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ.
ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಕಳೆದ ತಿಂಗಳು ಆಹಾರ ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿತ್ತು, ಆದರೆ ಸರ್ವರ್ ಡೌನ್ ಆಗಿ ತಿದ್ದುಪಡಿಗೆ ಮಾಡಲು ಸಾಕಷ್ಟು ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಸೇವಾ ಕೇಂದ್ರದಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಆಹಾರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ, ಮೊದಲ ವಲಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ಎಪಿಎಲ್, ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಗಸ್ಟ್ 5ರಿಂದ 7ರವರೆಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು, ರೇಷನ್ ಕಾರ್ಡ್ ತಿದ್ದುಪಡಿಗೆ ಬಯೋಮೆಟ್ರಿಕ್ ಸೌಲಭ್ಯ ಇರುವ ಕಂಪ್ಯೂಟರ್ ಅವಶ್ಯವಾಗಿದ್ದು, ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ ತಿದ್ದುಪಡಿ ಮಾಡಿಸಬಹುದಾಗಿದೆ.
ಏನೇನು ತಿದ್ದುಪಡಿ ಮಾಡಬಹುದು?
ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ, ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಿಕೊಳ್ಳಬಹುದು




