ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಮಾತಿಗೆ ನಾನು ಪ್ರತಿಕ್ರಿಯಿಸಲ್ಲ, ಅವರ ಮಾತಿಗೆ ಮೂರು ಕಾಸಿನ ಬೆಲೆ ಇದೆಯಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಅತ್ತಿಬೆಲ್ ಪಟಾಕಿ ದುರಂತದ ಕುರಿತ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ ಡಿ ಕೆ ಅವರ ಮಾತಿನಲ್ಲಿ ಸತ್ಯ ಇದೆಯಾ? ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೋರಿದೆ ಇದಕ್ಕಾಗಿ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕೆಂಬ ಹೆಚ್ ಡಿಕೆ ಆರೋಪಕ್ಕೆ ಈ ಮೇಲಿನಂತೆ ಪ್ರತಿಕ್ರಿಯೆ ನೀಡಿಡರು.
ಅವರಿಗೆ ಭ್ರಮೆ. ಮೈತ್ರಿ ಆದರೆ ನಾನು ಸಿಎಂ ಆಗುತ್ತೇನೆ ಎಂಬ ಭ್ರಮೆ ಇತ್ತು, ಅದು ಆಗಲಿಲ್ಲ. ಕಾಂಗ್ರೆಸ್ ಗೆ ಜನ ಆಶೀರ್ವಾದ ನೀಡಿದ್ದಾರೆ, ಅದಕ್ಕೆ ಅವರಿಗೆ ಚಡಪಡಿಕೆ ಶುರುವಾಗಿದೆ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.




