ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಸ್ಪಷ್ಟಪಡಿಸಿದರು.
ಕಂಠೀರವ ಸ್ಟುಡಿಯೋದಲ್ಲಿಂದು ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಕುಟುಂಬವರ್ಗ ಹಾಲು, ತುಪ್ಪ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಾಡಿನ ಜನ ಬೆಲೆ ಕಟ್ಟಲಾಗದ ವಸ್ತುವೊಂದನ್ನು ಕಳೆದುಕೊಂಡಿದ್ದಾರೆ ಎಂದು ನೆನಪುಮಾಡಿಕೊಂಡರು.

11 ನೇ ದಿನಕ್ಕೆ ಪುನೀತ್ ಸ್ಮರಣೋತ್ಸವ ಕಾರ್ಯಕ್ರಮ ನಡೆಸಲು ಕುಟುಂಬದವರು ತೀರ್ಮಾನ ಮಾಡಿದ್ದಾರೆ, ಇದಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದ ಸಚಿವರು, ಪುನೀತ್ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡುವ ಕುರಿತು ಅಧಿಕಾರಿಗಳು ನಿರ್ಧಾರ ಮಾಡಲಿದ್ದಾರೆಎಂದರು.
ದೂರದ ಊರಿನಿಂದ ಆಗಮಿಸುವ ಪುನೀತ್ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡುವುದು ನಮ್ಮ ಕರ್ತವ್ಯವಾಗಿದ್ದು, ಅದನ್ನು ಅಧಿಕಾರಿಗಳು ಮಾಡಿಕೊಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.




