ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರರೊಬ್ಬರ ಮನೆ ಮೇಲೆ ಐಟಿ ರೇಡ್ ಮಾಡಿ 42 ಕೋಟಿ ರೂಪಾಯಿ ವಶಪಡಿಸಿಕೊಂಡ ಬೆನ್ನಲ್ಲೆ ಕೆಸರೆರಚಾಟ ಜೋರಾಗಿಯೇ ಆರಂಭಗೊಂಡಿದೆ.
ಬಿಜೆಪಿ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಟ್ವೀಟರ್ ಖಾತೆಯಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ ಅಲ್ಲದೆ, 42 ಕೋಟಿ ರೂಪಾಯಿ ಹಣದ ಮೂಲವನ್ನು ಹುಡುಕುವುದ ತುಂಬಾ ಸುಲಭ ಎಂದು ತಿಳಿಸಿದ್ದಾರೆ.
ಅವರ ಟ್ವೀಟ್ ನ ಸಂಪೂರ್ಣ ವಿವರ ಇಲ್ಲಿದೆ.
ಈ ಐಟಿ ರೇಡ್ ನಲ್ಲಿ ಕಾಂಗ್ರೆಸ್ ಏಜಂಟ್ ಅಂಬಿಕಾಪತಿಯ ಮನೆಯಲ್ಲಿ ದೊರೆತ 42 ಕೋಟಿ ಹಣದ ಮೂಲವನ್ನು ಹುಡುಕುವುದು ಬಹಳ ಸುಲಭ.
- ಬಿಬಿಎಂಪಿ ಬಿಡುಗಡೆ ಮಾಡಿರುವ 650 ಕೋಟಿ ಅನುದಾನ ಪಡೆದಿರುವ ಗುತ್ತಿಗೆದಾರರು ಯಾರು? ಅವರ ಹಿನ್ನಲೆ ಏನು? ಬಾಕಿ ಬಿಲ್ಲುಗಳ ವಿವರ!
- 650 ಕೋಟಿ ರೂಗಳಿಗೆ ಎಷ್ಟು ಪರ್ಸೆಂಟೇಜ್ ಫಿಕ್ಸ್ ಮಾಡಲಾಗಿತ್ತು?
- ಈ ಹಣ ತಮಿಳುನಾಡಿನಿಂದ ತೆಲಂಗಾಣಕ್ಕೆ ಕಳುಹಿಸಲು ಯಾಕೆ ಯೋಜನೆ ಮಾಡಲಾಗಿತ್ತು?
- ತೆಲಂಗಾಣಕ್ಕೆ ಕಳುಹಿಸುವುದಾದರೆ ಚುನಾವಣೆಗಾಗಿ ಅಲ್ಲವೇ?
- ಕುಮಾರಕೃಪಾ ಗೋಡೆಗಳನ್ನು ಕೇಳಿದರು ಹೇಳುವುದು ಈ ಹಣ ನೀಡಿರುವ ಸುಮಾರು 23 ಗುತ್ತಿಗೆದಾರರು ಯಾರೆಂದು!
- ಕೆಂಪಣ್ಣ ಆಂಡ್ ಕಂಪನಿಗೆ ಈ ಮಾಹಿತಿ ಇಲ್ಲವಾ? ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.





