ಬೆಂಗಳೂರು : ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.


ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.




