DEATH THREAT TO MUKESH AMBANI: ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ: 20 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ

ಮುಂಬೈ: ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಓಬ್ಬರಾಗಿರುವ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಕೊಲೆ ಬೆದರಿಕೆ ಬಂದಿದೆ.
ಇ-ಮೇಲ್ ಮೂಲಕ ಕೊಲೆ ಬೆದರಿಕೆ ಸಂದೇಶ ರವಾನಿಸಲಾಗಿದ್ದು, 20 ಕೋಟಿ ರೂಪಾಯಿ ನೀಡದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ತಿಳಿಸಿದೆ.
ಈ ಸಂಬಂಧ ಗಾಮ್ದೇವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಯಾರು ಇ-ಮೇಲ್ ಕಳುಹಿಸಿದ್ದಾರೆ, ಯಾವ ಉದ್ದೇಶದಿಂದ ಕಳುಹಿಸಲಾಗಿದೆ ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ಇನ್ನು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ,.

More News