ROAD ACCIDENT: ಮಿನಿ ಬಸ್ ಪಲ್ಟಿ: 30 ಕ್ಕೂ ಹೆಚ್ಚು ಜನರು ಗಾಯ: ನಾಲ್ವರ ಸ್ಥಿತಿ ಗಂಭೀರ

ಹಾವೇರಿ: ಮದುವೆ ಮುಗಿಸಿ ಹಿಂದಿರುಗುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಹಾವೇರಿಯ ದೇವಗಿರಿ ಗ್ರಾಮದ ಎಂಜಿನಿಯರಿಂಗ್ ಕಾಲೇಜು ಬಳಿ ಘಟನೆ ನಡೆದಿದೆ.
ಕರ್ಜಗಿ ಗ್ರಾಮದಿಂದ ಮದುವೆ ಮುಗಿಸಿ ವಾಪಸ್ ಬರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದದ್ದರಿಂದ ಈ ಘಟನೆ ಸಂಭವಿಸಿದೆ.
ಗಾಯಗೊಂಡವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆಲವರ ಸ್ಥಿತಿ ಗಂಭೀರ ಹಿನ್ನೆಲೆಯಲ್ಲಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

More News