ಬೆಂಗಳೂರು : ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, 2023ನೇ ಸಾಲಿನಲ್ಲಿ ಒಟ್ಟು 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಪ್ರತಿನಿತ್ಯ ನೀಡಲಾಗಿದೆ, ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.

ಈ ಬಾರಿ ವಿಶೇಷವಾಗಿ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. 100 ವರ್ಷ ದಾಟಿದ ಒಬ್ಬರು ದಾವಣಗೆರೆ ಹಾಗೂ ಒಬ್ಬರು ಉತ್ತರ ಕನ್ನಡ ಜಿಲ್ಲೆಯವರು ಸೇರಿದಂತೆ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.


13 ಮಹಿಳೆಯರು ಮತ್ತು 54 ಪುರುಷರು ಹಾಗೂ ಮತ್ತು ಒಬ್ಬರು ಮಂಗಳ ಮುಖಿ ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ ಸಚಿವರು, ಪ್ರಶಸ್ತಿ ಪಡೆದವರಿಗೆ ರೂ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕ ನೀಡಲಾಗುವುದು ಎಂದರು.

ಚಲನಚಿತ್ರ ಕ್ಷೇತ್ರದಲ್ಲಿ ಡಿಂಗ್ರಿ ನಾಗರಾಜ್ ಮತ್ತು ಬ್ಯಾಂಕ್ ಜನಾರ್ಧನ್ ಅವರಿಗೆ ಪ್ರಶಸ್ತಿ ಲಭಿಸಿದರೆ, ಸಂಗೀತ ನೃತ್ಯ ಕ್ಷೇತ್ರದಲ್ಲಿ ಡಾ. ನಯನ ಎಸ್ ಮೋರೆ, ನೀಲಾ ಎಂ ಕೊಡ್ಲಿ, ಶಬ್ಬೀರ್ ಅಹಮದ್, ಡಾ ಎಸ್ ಬಾಳೇಶ ಭಜಂತ್ರಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.

ಪ್ರೊ ಸಿ ನಾಗಣ್ಣ, ಸುಬ್ಬು ಹೊಲೆಯಾರ್, ಸತೀಶ್ ಕುಲಕರ್ಣಿ ಲಕ್ಷೀಪತಿ ಕೋಲಾರ, ಪರಪ್ಪ ಗುರುಪಾದಪ್ಪ ಸಿದ್ದಾಪುರ ಹಾಗಹೂ ಡಾ ಕೆ ಫರೀಫಾ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರಿಗೆ ನ್ಯಾಯಾಂಗ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ.




