BJP HIGHCOMMAND: ಹೈಕಮಾಂಡ್ ಬುಲಾವ್: ಕೆ ಎಸ್ ಈಶ್ವರಪ್ಪ, ಪಿಸಿ ಮೋಹನ್, ಕೋಟಾ ಶ್ರೀನಿವಾಸ ಪೂಜಾರಿ ನವದೆಹಲಿಗೆ ದೌಡು

ಬೆಂಗಳೂರು : ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ, ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಸಂಸದ ಪಿ ಸಿ ಮೋಹನ್ ನವದೆಹಲಿ ಪ್ರಯಾಣ ಬೆಳೆಸಿದ್ದಾರೆ.
ಸುದ್ದಿಗಾರರೊಂದಿಗೆ ಈ ವಿಚಾರ ತಿಳಿಸಿದ ಕೆ ಎಸ್ ಈಶ್ವರಪ್ಪ, ಹೈಕಮಾಂಡ್ ಯಾಕೆ ಕರೆದಿದ್ದಾರೆ ಅನ್ನೋದು ಗೊತ್ತಿಲ್ಲ, ಅಲ್ಲಿಗೆ ಹೋದ ಮೇಲೆ ಗೊತ್ತಾಗುತ್ತದೆ ಎಂದು ಹೇಳಿದ ಅವರು, ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ನೇಮಕ ಕುರಿತು ನಾನು ಹೈಕಮಾಂಡ್ ಗೆ ಸಲಹೆ ಕೊಡುವಷ್ಟು ದೊಡ್ಡವನಲ್ಲ ಎಂದು ಹೇಳಿದರು.
ಹೈಕಮಾಂಡ್ ನಮಗಿಂತ ತಿಳಿದವರು, ಪಕ್ಷಕ್ಕಾಗಿ ದುಡಿದವರು ಇದ್ದಾರೆ. ಅವರು ತೀರ್ಮಾನ ಮಾಡುತ್ತಾರೆ, ಯಾಕೆ ತಡ ಮಾಡಿದ್ದಾರೆ ಎಂಬುದಕ್ಕೆ ಅದಕ್ಕೆ ಒಂದು ಕಾರಣ ಇರಬಹುದು, ಆ ಕಾರಣ ಏನು ಎಂದು ತಿಳಿಯುವ ಅಗತ್ಯ ನನಗಿಲ್ಲ ಎಂದು ಅಭಿಪ್ರಾಯಪಟ್ಟರು.
ವೇಣುಗೋಪಾಲ್, ಸುರ್ಜೇವಾಲಾ ಬೆಂಗಳೂರಿಗೆ ಬಂದಿರುವುದು ಮಾಸಿಕ ಕಲೆಕ್ಷನ್ ಗಾಗಿ
ಕಾಂಗ್ರೆಸ್ ನ ಯಾವ ಆಂತರಿಕ ಸಂಘರ್ಷವೂ ಬಗೆಹರಿದಿಲ್ಲ, ಮಾಸಿಕ ಕಲೆಕ್ಷನ್ ಕೊಟ್ಟಿಲ್ಲ ಎಂದು ಕರ್ನಾಟಕ ಉಸ್ತುವಾರಿಗಳಾದ ವೇಣುಗೋಪಾಲ್, ಸುರ್ಜೇವಾಲಾ ಬಂದಿದ್ದಾರೆ, ಅವರು ಸಮಸ್ಯೆ ಬಗೆಹರಿಸಲು ಬಂದಿಲ್ಲ, ಪಂಚರಾಜ್ಯಗಳ ಚುನಾವಣೆ ಇದೆ, ಹಣ ಕೊಡ್ತೀವಿ ಅಂತ ಕೊಟ್ಟಿಲ್ಲ, ಕೊಡ್ರಪ್ಪ ಅಂತ ಬಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.


ಆಪರೇಷನ್ ಕಮಲ ಬಗ್ಗೆ ಕಾಂಗ್ರೆಸ್ ಆರೋಪ ಸುಳ್ಳು ಎಂದು ಹೇಳಿದ ಅವರು, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಕೊಡಲು ನಮಗೇನು ಗ್ರಹಚಾರ ಕೆಟ್ಟಿದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬರ, ರೈತರ ಬಗ್ಗೆ ರಾಜ್ಯ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ, ಮಾತೆತ್ತಿದರೆ ಕೇಂದ್ರ ಪರಿಹಾರ ಕೊಟ್ಟಿಲ್ಲ ಅಂತ ಹೇಳುತ್ತಾರೆ, ಆದ್ರೆ ಬರೀ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ, ಉಸ್ತುವಾರಿ ಸಚಿವರು ಬರ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿಲ್ಲ, ಪರಿಹಾರ ಕೊಡೋದಿರಲಿ, ರೈತರಿಗೆ ಕನಿಷ್ಟ ಸಾಂತ್ವನ ಹೇಳಿಲ್ಲ ಎಂದು ಆರೋಪಿಸಿದರು.
ಆರು ತಿಂಗಳು ಮಾತ್ರ ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಸರ್ಕಾರ ಇನ್ನು ಆರು ತಿಂಗಳು ಇರಬಹುದು ಅಂತಾ ಹೇಳಿದರೆ ಕಾಂಗ್ರೆಸ್ ಶಾಸಕರೇ ನನಗೆ ಹೀಯಾಳಿಸುತ್ತಾರೆ ಎಂದು ಹೇಳಿದ ಅವರು, ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಇರುತ್ತೋ ಅಥವಾ ಇರಲ್ವೋ ನೋಡೋಣ ಎಂದರು.
ಸರ್ಕಾರ ಬೀಳಿಸಲು ನಾವು ಯಾವುದೇ ಶ್ರಮ ಹಾಕುತ್ತಿಲ್ಲ, ಹಿಂದೆಯೂ ನಾವು ಶ್ರಮ ಹಾಕಿರಲಿಲ್ಲ, ಕಾಂಗ್ರೆಸ್ ನವರು ಯಾರೋ ಕಾರ್ಯಕರ್ತರನ್ನು ಹಿಡಿದುಕೊಂಡು ಪಕ್ಷ ಸೇರಿಸಿಕೊಂಡಿದ್ದಾರೆ, ಒಬ್ಬನೇ ಒಬ್ಬ ಶಾಸಕನನ್ನು ಕರೆದುಕೊಂಡು ಹೋಗಲು ಆಗಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಸುಳ್ಳುಗಾರ, ರಾತ್ರೋ ರಾತ್ರಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಟ್ಟ ಡಿಸಿಎಂ ಡಿಕೆ ಶಿವಕುಮಾರ್ ಕಳ್ಳ ಅಂತಾರೆ. ಒಬ್ಬರನ್ನ ಕಳ್ಳ, ಮತ್ತೊಬ್ಬರನ್ನ ಸುಳ್ಳ ಅದ್ರೆ ಸಿಟ್ಟು ಮಾಡಿಕೊಳ್ಳುತ್ತಾರೆ, ನಾನು ಹೇಳ್ತಿಲ್ಲ ಜನ ಮಾತಾಡ್ತಿದ್ದಾರೆ ಎಂದು ಆರೋಪ ಮಾಡಿದರು.

More News