Heavy Rain: ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ: ರೈತರ ಮುಖದಲ್ಲಿ ಮಂದಹಾಸ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಮುಂಗಾರು ಮಳೆ‌ ಕೈಕೊಟ್ಟಿತ್ತು. ಈಗ ಹಿಂಗಾರು ಬಿತ್ತನೆ ಮಾಡಿದ್ದ ರೈತರು ಆಕಾಶದತ್ತ ಮುಖ ಮಾಡಿಕೊಂಡಿದ್ದರು‌. ಆದ್ರೆ ಈಗ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ರೈಯರು ಕಡಲೆ, ಜೋಳ, ಗೋಧಿ, ಹತ್ತಿ, ಮೆಣಸಿನಕಾಯಿ, ಈರುಳ್ಳಿ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ಆದ್ರೆ ಮಳೆ ಕೈಕೊಟ್ಟಿದ್ದರಿಂದ ಬೆಳೆದ ಬೆಳಗಳು ಒಣಗಿ ಹೋಗುತ್ತಿದ್ದವು. ಆದ್ರೆ ಅಲ್ಲಲ್ಲಿ ಉಳಿದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪಂಪಸೆಟ್ ಗಳ ಮೊರೆ ಹೋಗಿದ್ದರು.‌ ಇನ್ನು ಕೆಲವರು ನೀರಿ‌ನ ಟ್ಯಾಂಕರ ಬಳಸಿ ನೀರು ಉಳಿದಿದ್ದರು.

ಆದ್ರೆ ಇಂದು ಹಿಂಗಾರು ಕೈಕೊಟ್ಟಿತ್ತು ಎನ್ನುವಷ್ಟರಲ್ಲಿ ಮಳೆರಾಯ ಕರುಣೆ ತೋರಿದ್ದು, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ಇನ್ನೂ ವಾಣಿಜ್ಯ ನಗರಿಯ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದ ದೃಶ್ಯ ಸಾಮಾನ್ಯವಾದರೆ ನಗರದ ಪ್ರಮುಖ ರಸ್ತೆಗಳಲ್ಲಿ ಚರಂಡಿ ನೀರು ಹರಿದು ವಾಹನ ಸವಾರರು ಪರದಾಡುವಂತಾಯಿತು.‌ ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿತ್ತು.

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿದ ಮಳೆಗೆ ರಸ್ತೆಗಳೆಲ್ಲ ಕೆರೆಯಂತಾಗಿದ್ದವು. ನಗರದ ಬಹುತೇಕ ರಸ್ತೆಗಲ್ಲಿ ಮಳೆ‌ ನೀರು ನಿಂತು ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.‌

ಹುಬ್ಬಳ್ಳಿಯ ಗಣೇಶನಗರದ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಶಾಲಾ‌ ಮಕ್ಕಳು, ಸಾರ್ವಜನಿಕರು ನೀರಿನಲ್ಲಿಯೇ ಓಡಾಡುವ ದೃಶ್ಯ ಸಾಮಾನ್ಯವಾಗಿತ್ತು. ಸ್ಥಳೀಯ ಆಡಳಿತದ ವಿರುದ್ಧ ಹಿಡಿಶಾಪ ಹಾಕಿದ್ದಾರೆ. ಅಲ್ಲದೇ ಪ್ರತಿ ಬಾರಿ ಮಳೆ ಬಂದಾಗಲೂ ಇಂತಹ ಅವ್ಯವಸ್ಥೆ ಸರ್ವೇಸಾಮಾನ್ಯವಾಗಿದೆ.

ಇನ್ನೂ ಹುಬ್ಬಳ್ಳಿಯ ಚನ್ನಪೇಟೆಯಲ್ಲಿ ಬಹುತೇಕ ಮನೆಗಳಿಗೆ ನೀರು ನುಗ್ಗಿದ್ದು, ಜನರು ಮಳೆಯ ನೀರನ್ನು ಹೊರ ಹಾಕಲು ಹರಸಾಹಸಪಡುವಂತಾಗಿದೆ. ಒಳಚರಂಡಿ‌ ಯೋಜನೆಗೆ ಸಂಬಂಧಿಸಿದಂತೆ ಹಲವಾರಿ ಬಾರಿ ಇಲ್ಲಿನ‌‌ ಜನರು ಮಹಾನಗರ ಪಾಲಿಕೆಗೆ ದೂರು‌ನೀಡಿದ್ದಾರೆ. ಆದ್ರೂ ಮಳೆ‌ ಬಂದಾಗಲೆಲ್ಲ ಇಂತ ಸಮಸ್ಯೆ ಉದ್ಬವಾಗುತ್ತದೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪಾಲಿಕೆಯು ಸೂಕ್ತ ಕ್ರಮಗಳನ್ನು ಜರುಗಿಸಬೇಕು ಎಂದು ಒತ್ತಾಯಿಸಿದರು.

More News