ಹುಬ್ಬಳ್ಳಿ: ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆಲ್ಲುತ್ತದೆ. ರೋಹಿತ್ ಶರ್ಮಾ ನೇತೃತ್ವದಲ್ಲಿನ ತಂಡ ಒಳ್ಳೆಯ ಆಟ ಆಡಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ವಿಶ್ವಾಸ ವ್ಯಕ್ತಪಡಿಸಿದರು.
19 ರಂದು ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ವಿಶ್ವಕಪ್ ಪಂದ್ಯ ನೋಡಲು ಕ್ರೀಡಾ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ವಿಶ್ವಕಪ್‌ನಲ್ಲಿ ಸೋಲನುಭವಿಸದೆ ಅದ್ಭುತ ಪ್ರದರ್ಶನ ನೀಡಿರುವ ಭಾರತ ತಂಡ, ಫೈನಲ್‌ನಲ್ಲೂ ಮಿಂಚುವ ಮೂಲಕ ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ.

ಇದೇ ವೇಳೆ ಭಾರತ ತಂಡಕ್ಕೆ ಶುಭ ಹಾರೈಸಿದ ಶಾಸಕ ಮಹೇಶ ಟೆಂಗಿನಕಾಯಿ, ನಾಳೆ ಅಹ್ಮಮದಾಬಾದ್ ನಲ್ಲಿ ಭಾರತ ಆಸ್ಟ್ರೇಲಿಯಾ ವಿಶ್ವ ಕಪ್ ಪಂದ್ಯ ನಡೆಯಲಿದೆ. ನಾಳಿನ ಪಂದ್ಯದಲ್ಲಿ ಭಾರತವೇ ಗೆಲ್ಲಲಿದೆ.
ಈಗಾಗಲೇ 10 ಪಂದ್ಯಗಳಲ್ಲಿ ಭಾರತ ಗೆದ್ದಿದೆ.
ನಾಳಿನ ಪಂದ್ಯದಲ್ಲಿ ಸಹ ಭಾರತ ಗೆಲ್ಲುತ್ತದೆ.
ರೋಹಿತ್ ಶರ್ಮಾ ನೇತೃತ್ವದಲ್ಲಿನ ತಂಡ ಒಳ್ಳೆಯ ಆಟ ಆಡಲಿದೆ. ಭಾರತ ತಂಡಕ್ಕೆ ಶುಭ ಹಾರೈಕೆ ಎಂದರು.




