ದಾವಣಗೆರೆ : ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು ಮತ್ತೆ ದಾವಣಗೆರೆಯ ವಿರಕ್ತ ಮಠದಲ್ಲಿ ಶರಣರನ್ನು ಪೊಲೀಸರು ಬಂಧಿಸಿದರು.
ಶರಣನ್ನು ಬಂಧಿಸಿದ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಕರೊದೊಯ್ಯಲಾಗುವುದು ಎಂದು ಪೊಲೀಸರು ತಿಳಇಸಿದ್ದಾರೆ. ಸಿಪಿಐ ವೈ ಮುದ್ದುರಾಜು ಅವರನ್ನೊಳಗೊಂಡ ಪೊಲೀಸರ ತಂಡ ಶರಣರನ್ನು ಬಂಧಿಸಿತು.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದರಿಂದ ಕಳೆದ ಗುರುವಾರ ಅವರು ನ್ಯಾಯಾಲಯದಿಂದ ಬಿಡುಗಡೆಗೊಂಡು ದಾವಣಗೆರೆಯ ವಿರಕ್ತ ಮಠದಲ್ಲಿ ಅವರು ವಾಸ್ತವ್ಯ ಹೂಡಿದ್ದರು. ಇದೀಗ ಅವರು ಎರಡನೇ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ.




