COMPLAINT AGAINST RAHUL GANDHI: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತಾಗಿ ನೀಡಿರುವ ಪನೌತಿ (ಅಪಶಕುನ) ಹೇಳಿಕೆ ನೀಡದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ನವೆಂಬರ್ 19ರಂದು ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದಿತ್ತು. ಈ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರು ವೀಕ್ಷಣೆ ಮಾಡಿದ್ದರು. ಪ್ರಧಾನಿ ಅಲ್ಲಿಗೆ ಭೇಟಿ ನೀಡಿದ ಕಾರಣದಿಂದಲೇ ಭಾರತ ತಂಡ ಸೋಲು ಕಂಡಿತ್ತು ಎಂದು ಟೀಕಿಸಿದ್ದರು.
ಪಿಎಂ ಎಂದರೆ ಪನೌತಿ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಉದ್ಯಮಿ ಗೌತಮ್ ಅದಾನಿ ಅವರು ಜನರ ಜೇಬಿಗೆ ಕನ್ನಾ ಹಾಕುವಾಗ ಮೋದಿ ಜನರ ಗಮನವನ್ನು ಬೇರೆಡೆಗೆ ತಿರುಗಿಸುತ್ತಾರೆ, ಪ್ರಧಾನಿ ದೇಶಕ್ಕೆ ದುರಾದೃಷ್ಟ ತಂದರು ಎಂದು ಟೀಕಿಸಿದ್ದರು.
ಪ್ರಧಾನಿಯೊಬ್ಬರನ್ನು ಪನಾತಿ ಮತ್ತು ಜೇಬುಗಳ್ಳರಿಗೆ ಹೋಲಿಸುವುದು ಸ್ವೀಕಾರಾರ್ಹವಲ್ಲ. ಇದು ರಾಜಕೀಯ ಚರ್ಚೆಯ ಮಟ್ಟ ಹದಗೆಡುವುತ್ತಿರುವುದರ ಸಂಕೇತವಾಗಿದೆ ಎಂದು ಬಿಜೆಪಿ ನೀಡಿರುವ ದೂರಿನಲ್ಲಿ ತಿಳಇಸಿದೆ. ಇದೊಂದು ಕೆಟ್ಟ ನಿಂದನೆ ಮತ್ತು ವ್ಯೆಯಕ್ತಿಕ ದಾಳಿಗೆ ಸಮನಾಗಿರುತ್ತದೆ, ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯುವ ಸ್ಪಷ್ಟ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡಲಾಗುತ್ತದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದೆ.
ಇದರ ಜತೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧವೂ ದೂರು ನೀಡಿದ್ದು, ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರ ಜಾತಿಯನ್ನು ಗುಜರಾತ್ ನ ಒಬಿಸಿ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಆರೋಪಿಸಿದ್ದರು. ಇವರ ವಿರುದ್ಧವೂ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ.

More News