ಬೆಂಗಳೂರು: ಡಿಕೆ ಶಿವಕುಮಾರ್ ಪರ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ನಾವೂ ಕೂಡ ಕೋರ್ಟ್ ನಲ್ಲಿ ಹೋರಾಟ ಮಾಡ್ತೇವೆ. ಎಲ್ಲವನ್ನೂ ನ್ಯಾಯಾಲಯ ನೋಡಿಕೊಳ್ಳುತ್ತೆ
ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಡಿಕೆ ಶಿವಕುಮಾರ್ ಪ್ರಕರಣದ ಕುರಿತು ಬೆಂಗಳೂರಿನಲ್ಲಿ ಗೋಷ್ಠಿ ಕರೆದು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರ ಸಿಬಿಐ ಕೇಸ್ ವಾಪಸ್ ಪಡೆದಿದ್ದಾರೆ. ಈ ಹಿಂದೆ ಎಜಿ ಒಪ್ಪಿಗೆ ಇಲ್ಲದೇ ಬಿಜೆಪಿಯವ್ರು ಕಾನೂನು ಬಾಹಿರವಾಗಿ ಅನುಮತಿ ಕೊಟ್ಟಿದ್ರು ಅಂತ ಆರೋಪಿಸಿದ್ದಾರೆ. ಆದರೆ ವಾಸ್ತವ ಸ್ಥಿತಿ ಇಡಿಯವ್ರು ಸಿಬಿಐಗೆ ಕೇಸ್ ಕೊಡಿ ಅಂತ ಪತ್ರ ಬರೆದಿದ್ದರು. ಹಾಗಾಗಿ ನಾವು ಪ್ರಕರಣ ಸಿಬಿಐಗೆ ಕೊಟ್ಟಿದ್ದೆವು.ಡಿಕೆ ಶಿವಕುಮಾರ್ ಇದನ್ನು ಹೈಕೋರ್ಟ್ ನಲ್ಲಿ ಪ್ರಸ್ತಾಪಿಸಿದ್ರು. ಹೈಕೋರ್ಟ್ ಇದನ್ನು ತಳ್ಳಿ ಹಾಕಿತ್ತು. ಡಿಕೆ ಶಿವಕುಮಾರ್ ಅವರನ್ನು ಸಿಬಿಐ ಕೇಸ್ ನಿಂದ ರಕ್ಷಿಸಲು ಈ ನಿರ್ಧಾರ ತಗೊಂಡಿದ್ದಾರೆ. ನಾವೂ ಕೂಡ ಕೋರ್ಟ್ ನಲ್ಲಿ ಹೋರಾಟ ಮಾಡ್ತೇವೆ. ಸರ್ಕಾರ ಸಿಬಿಐ ಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದು ಕೋರ್ಟ್ ಒಪ್ಪಲ್ಲ. ಕೋರ್ಟ್ ಗೆ ಹೆಚ್ಚಿನ ದಾಖಲೆಗಳ ಅಗತ್ಯ ಬಂದರೆ ಒದಗಿಸ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ಸಿದ್ದರಾಮಯ್ಯ ಮಾಡಿದ ಕೆಲಸ ಅಕ್ಷಮ್ಯ ಅಪರಾಧ. ಶಿವಕುಮಾರ್ ಅವರನ್ನು ಸಿಬಿಐ ಕೇಸ್ ನಿಂದ ರಕ್ಷಿಸಲು ಸಿದ್ದರಾಮಯ್ಯ ಈ ನಿರ್ಧಾರ ತಗೊಂಡಿದ್ದಾರೆ. ಕಾನೂನು ಬಾಹಿರವಾಗಿ ಡಿಕೆ ಶಿವಕುಮಾರ್ ಅವ್ರನ್ನ ಉಳಿಸಲು ಈ ಕೆಲಸವನ್ನು ಸಿಎಂ ಮಾಡಬಾರದಾಗಿತ್ತು. ಈಗಲಾದರೂ ಸರ್ಕಾರ ತನ್ನ ನಿರ್ಣಯ ವಾಪಸ್ ಪಡೆಯಲಿ. ರಾಜ್ಯದ ಜನ ಇದನ್ನು ಕ್ಷಮಿಸಲ್ಲ. ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಿ ನಿರ್ಣಯ ವಾಪಸ್ ಪಡೆಯಲಿ ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಅವರು ಹಿಂದಿನ ಸರ್ಕಾರದ ಕಾನೂನು ಬಾಹಿರ ಆದೇಶ ವಾಪಸ್ ಪಡೆದಿದ್ದೇವೆ ಅಂದಿದ್ದಾರೆ. ಇದು ವಾಸ್ತವಿಕ ಅಂಶ ಅಲ್ಲ. ಡಿಕೆ ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ಸಿದ್ದರಾಮಯ್ಯ ಈ ನಿರ್ಧಾರ ತಗೊಂಡಿದ್ದಾರೆ. ನಾವು ಎಜಿ ಅಭಿಪ್ರಾಯ ಪಡೆದೇ ಸಿಬಿಐಗೆ ಪ್ರಕರಣ ಕೊಟ್ಟಿದ್ದೆವು. ಅಧಿವೇಶನದಲ್ಲಿ ಇನ್ನಷ್ಟು ದಾಖಲೆಗಳನ್ನು ಇಟ್ಟು ಇದರ ಬಗ್ಗೆ ಚರ್ಚೆ ಮಾಡ್ತೇವೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು, ನಾವು ಎಜಿ ಅಭಿಪ್ರಾಯ ಪಡೆದಿದ್ದೆವು. ಕಾನೂನು ಚೌಕಟ್ಟಿನಲ್ಲೇ ಪ್ರಕರಣ ಸಿಬಿಐಗೆ ಕೊಟ್ಟಿದ್ದೆವು. ಈಗ ಹಿಂಬಾಗಿಲ ಮೂಲಕ ಪ್ರಕರಣದ ಅನುಮತಿ ವಾಪಸ್ ಪಡೆದಿದ್ದು ಅಕ್ಷಮ್ಯ ಅಪರಾಧ. ಡಿಕೆ ಶಿವಕುಮಾರ್ ಅಪರಾಧದಲ್ಲಿ ಸಿದ್ದರಾಮಯ್ಯ ಕೂಡ ಶಾಮೀಲಾಗಲು ಹೊರಟಿದ್ದಾರೆ. ಮುಖ್ಯಮಂತ್ರಿಗಳು ವಾಸ್ತವಿಕ ಸ್ಥಿತಿ ತಿಳ್ಕೊಬೇಕು. ಸಿದ್ದರಾಮಯ್ಯ ನೀವು ಇದರಲ್ಲಿ ಪಾಲುದಾರ ಆಗಲು ಹೊರಟಿದ್ದೀರಿ. ರಾಜ್ಯದ ಜನತೆ ಇದನ್ನು ಕ್ಷಮಿಸಲ್ಲ. ಎಜಿ ಕೂಡ ತಮ್ಮ ಕರ್ತವ್ಯ ಸರಿಯಾಗಿ ನಿಭಾಯಿಸಿಲ್ಲ ಎನ್ನುವ ಪರಿಸ್ಥಿತಿ ಬಂದಿದ್ದು ಗೌರವ ಅಲ್ಲ ( ಈಗಿನ ಎಜಿ)
ಅಡ್ವೋಕೇಟ್ ಜನರಲ್ ಕಾನೂನು ಚೌಕಟ್ಟಿನಲ್ಲಿ ಸಲಹೆ ನೀಡಬೇಕು. ಇಲ್ಲವಾದರೆ ಜನ ಛೀಮಾರಿ ಹಾಕುತ್ತಾರೆ ಎಂದು ವಾಗ್ದಾಳಿ ನಡೆಸಿದರು.




