ಸುಲ್ತಾನಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸಲ್ ಬೆಲೆಯನ್ನು ಕಡಿತಗೊಳಿಸಿರುವುದನ್ನು ಬಿಜೆಪಿ ಸಂಸದೆ ಮೇನಕಾ ಗಾಂಧಿ ಸ್ವಾಗತಿಸಿದ್ದಾರೆ. ತೈಲೋತ್ಪನ್ನದ ರೀತಿಯಲ್ಲಿಯೇ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಉತ್ತರಪ್ರದೇಶದ ಸುಲ್ತಾನಪುರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ ಪಿಜಿ ಸಿಲಿಂಡರ್ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕಡಿತಗೊಳಸಬೇಕೆಂದು ಆಗ್ರಹಿಸಿದ್ದಾರೆ.
ತಮ್ಮದೇ ಪಕ್ಷದ ಮುಖಂಡರನ್ನು ಆಗ್ರಹಿಸಿರುವ ಅವರು, ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದ ಅವರು, ಒಂದೆಡೆ ಕೊರೊನಾ ಸಮಸ್ಯೆ, ಇನ್ನೊಂದೆಡೆ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದ್ದರಿಂದ ಬೆಲೆ ಇಳಿಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ.




