ಬೆಂಗಳೂರು: ಡಿ ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನ್ನ ಸಿಬಿಐ ತನಿಖೆ ಒಪ್ಪಿಗೆ ಹಿಂಪಡೆಯಲು ಸರ್ಕರ ನಿರ್ಧರಿಸಿದ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಯತ್ನಾಳ್ ಕೋರ್ಟ್ ಮೆಟ್ಟಿಲೇರಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಇರೋ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನ ಸಿಬಿಐ ತನಿಖೆಯಿಂದ ವಾಪಸ್ ಪಡೆದ ಮೇಲೆ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಕಾಂಗ್ರೆಸ್ ತಮ್ಮ ಸರ್ಕಾರದ ನಿರ್ಧಾರವನ್ನ ಸಮರ್ಥನೆ ಮಾಡಿಕೊಳ್ತಾ ಇದ್ರೆ ಅತ್ತ ಬಿಜೆಪಿ, ಜೆಡಿಎಸ್ ಸರ್ಕಾರದ ವಿರುದ್ಧ ಸಮರ ಸಾರಿವೆ.
ಇದೀಗ ಬಿಜೆಪಿ ನಾಯಕ ಯತ್ನಾಳ್ ಡಿಕೆ ಶಿವಕುಮಾರ್ ವಿರುದ್ಧ ಕೋರ್ಟ್ ನಲ್ಲಿ ಸಮರ ಸಾರಿದ್ದಾರೆ.
ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನುಬಾಹಿರವಾಗಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ಮಾಡಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು ಮನವಿ ನೀಡಬೇಕೆಂದು ಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಡಿಕೆ ಶಿವಕುಮಾರ್ ಕೇಸ್ ವಿಚಾರ ಸಧ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣ್ತಿಲ್ಲ.




