ಚೆನ್ನೈನಲ್ಲಿ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ: ರಾಜ್ಯದಲ್ಲಿ ಹಲವೆಡೆ ಯಲ್ಲೊ ಅಲರ್ಟ್

ಚೆನ್ನೈ : ಚೆನ್ನೈ ನಗರ ಮತ್ತು ಸುತ್ತಮುತ್ತ ಪ್ರದೇಶದಲ್ಲಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ಥ ಉಂಟಾಗಿದೆ. ರಸ್ತೆಯಲ್ಲಿ ಸುಮಾರು ಎರಡು ಅಡಿಗಳಷ್ಟು ನೀರು ನಿಂತಿದ್ದರಿಂದ ಸಂಚಾರ ಸಂಪೂರ್ಣವಾಗಿ ಬಂದ್ ಆಗಿತ್ತು. ರೈಲು ಸಂಚಾರ ಸಂಪೂರ್ಣವಾಗಿ ವ್ಯತ್ಯಯ ಉಂಟಾಗಿತ್ತು. ಇದರಿಂದ ಅಲ್ಲಿನಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಚನ್ನೈನ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲೂ ಮಳೆ ಸುರಿದಿದ್ದರಿಂದ ಕೆಲವೊಂದು ವಿಮಾನಗಳ ಹಾರಾಟದಲ್ಲೂ ವ್ಯತ್ಯಯ ಉಂಟಾಗಿತ್ತು. ಕೂಡಲೇ ಯಂತ್ರೋಪಕರಣಗಳಿಂದ ರನ್ ವೇನಲ್ಲಿ ತುಂಬಿದ್ದ ನೀರನ್ನು ಖಾಲಿ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.


ಅಲ್ಲಿನ ಜಲಾಶಯಗಳು ತುಂಬಿದ್ದರಿಂದ ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಯಿತು, ನದಿ ಪಕ್ಕದ ನಿವಾಸಿಗಳಿಗೆ ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ. ಕಳೆದ ಐದಾರು ವರ್ಷಗಳ ಹಿಂದೆಯೂ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದುಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆ
ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕರಾವಳಿಯಲ್ಲೂ ಮಳೆಯಾಗುವ ಸಾಧ್ಯತೆಗಳಿವೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಕೊಡಗು ತುಮಕೂರು ಜಿಲ್ಲೆಗಳಲ್ಲಿ ಯಲ್ಲೂ ಅಲರ್ಟ್ ಘೋಷಿಸಲಾಗಿದೆ ಇದರೊಂದಿಗೆ ಕರಾವಳಿ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

More News