ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತ್ರ ಜಿಲ್ಲೆಯ ಆನೇಕಲ್ ತಾಲೂಕು ಸೇರಿದಂತೆ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಶಾಲೆಗಳ ಆಡಳಿತ ಮಂಡಳಿಯ ಇ ಮೇಲ್ ಗೆ ಬೆದರಿಕೆ ಬಂದಿದ್ದು, ಇದರಲ್ಲಿ ಅಂತರಾಷ್ಟ್ರೀಯ ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ, ಇವುಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಬಂದಿರುವ ಎಲ್ಲಾ ಶಾಲೆಗಳಿಗೆ ಆಯಾ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಇದೊಂದು ಹುಸಿ ಕರೆ ಎಂದು ತಿಳಿದುಬಂದಿದೆ. ಅದೇ ರೀತಿಯಲ್ಲಿ ಪಬಾಂಬ್ ನಿಷ್ಕ್ರೀಯ ದಳದ ಪೊಲೀಸರು ಕೂಡ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಇದೊಂದು ಹುಸಿ ಬಾಂಬ್ ಬೆದರಿಕೆಯಾಗಿದೆ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಇ ಮೇಲ್ ನಲ್ಲಿ ಪ್ರಸ್ತಾಪಿಸಿರುವ ಅಂಶಗಳು ಮಾತ್ರ ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.,

ಪರಿಶೀಲನೇ ನಡೆಸಲಾಗುತ್ತಿದೆ – ನಗರ ಪೊಲೀಸ್ ಕಮಿಷನರ್
ಬೆದರಿಕೆ ಬಂದಿರುವ ಎಲ್ಲಾ ಶಾಲೆಗಳಲ್ಲಿ ಕಟ್ಟು ನಿಟ್ಟಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಪೋಷಕರು, ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿಲ್ಲ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸದಾಶಿವನಗರದ ಮನೆಯ ಮುಂದಿರುವ ಶಾಲೆಯಲ್ಲಿ ಪೊಲೀಸರು ನಡೆಸಿದ ತಪಾಸಣೆಯನ್ನು ಪರಿಶೀಲನೆ ನಡೆಸಿದರು.




