ಬೆಂಗಳೂರು : ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ಕ್ವೈಡ್‌ಗಳನ್ನು ಕಳುಹಿಸಿ ತಪಾಸಣೆ ನಡೆಸಬೇಕು. ಕಟ್ಟೆಚ್ಚರಿಕೆ ವಹಿಸುವಂತೆ ನಿರ್ದೇಶಿಸಿದರು.


ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದರು.

ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ. ಕಳೆದ ವರ್ಷವು ಇದೇ ರೀತಿ ಕರೆ ಬಂದಿತ್ತು ಎನ್ನಲಾಗುತ್ತಿದೆ. ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಾಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮಕ್ಕಳು ಆತಂಕಪಡುವುದು ಬೇಡ ಎಂದು ತಿಳಿಸಿದ್ದಾರೆ.




