CBI Investigation: ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ ಹಗರಣ: ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಠೇವಣಿ ಹಣ ಸೇರಿದಂತೆ ಬ್ಯಾಂಕ್ ಸಂಬಂಧಿಸಿದ ಹಣವನ್ನ ದುರುಪಯೋಗ ಪಡಿಸಿಕೊಂಡ ಆರೋಪ ಹಿನ್ನಲೆ
ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ ನ ತನಿಖೆಗೆ ಸಿಬಿಐಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ನ್ನ ವಿಧಿಸುವುದು. ಉದ್ಯೋಗಿಗಳೊಂದಿಗೆ ಶಾಮೀಲಾಗಿ ನಕಲಿ ಠೇವಣಿ ಹಾಗೂ ನಿಶ್ಚಿತ ಠೇವಣಿಗಳ ಆಧಾರದಲ್ಲಿ ಭಾರಿ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ್ದು, ಸೇರಿದಂತೆ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ಎಂಬ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿತ್ತು.

ಪ್ರಕರಣದ ತನಿಖೆಗೆ ಮುಂದಾದ ಪೊಲೀಸರು, ಸಂಸ್ಥೆಯ ಅಧ್ಯಕ್ಷ ಸೇರಿದಂತೆ 4 ಮಂದಿಯನ್ನು ಅರೆಸ್ಟ್ ಮಾಡಿದ್ದರು. ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ರಕ್ಷಣೆ ಕಾಯಿದೆ-2004 ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಸಂಸ್ಥೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬಳಿಕ ಇ.ಡಿ. ಅಧಿಕಾರಿಗಳು 2020ರಲ್ಲಿ ಪಿಎಂಎಲ್‌ಎ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ಅಲ್ಲದೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕಾಂಗ್ರೆಸ್​ ವಿಧಾನಪರಿಷತ್ ಸದಸ್ಯ ಯುಬಿ ವೆಂಕಟೇಶ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು. ಇದೀಗ ಹಗರಣದ ತನಿಖೆಯನ್ನ ಸಿಬಿಐಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.

More News