ಬೆಂಗಳೂರು: ನಗರದ ಆರ್.ಟಿ ನಗರ ದಿನ್ನೂರು ಮುಖ್ಯರಸ್ತೆಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ನಡೆದಿದೆ.
ವ್ಯಕ್ತಿಯ ಮುಖ ಗುರುತು ಸಿಗದಂತೆ ಹಲ್ಲೆ ಮಾಡಿ ಹತ್ಯೆ ಮಾಡಿ ಆರೋಪಿಗಳು ಪರಾರಿಯಾಗಿದ್ದು, ದಿನ್ನೂರು ಮುಖ್ಯ ರಸ್ತೆಯ ವೈಟ್ ಹೌಸ್ ಬಳಿಯ ವಾಣಿಜ್ಯ ಕಟ್ಟಡದ ನೆಲಮಹಡಿಯಲ್ಲಿ ಘಟನೆ ನಡೆದಿದೆ.

ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಆರ್ ಟಿ ನಗರ ಪೊಲೀಸರು ರವಾನೆ ಮಾಡಿದ್ದಾರೆ. ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.




