Yuva Nidhi Scheme: ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಆಹ್ವಾನ

ಬೆಂಗಳೂರು: ರಾಜ್ಯದಲ್ಲಿ 2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ) ಹಾಗೂ ಡಿಪ್ಲೊಮಾ ಹೊಂದಿದ ನಿರುದ್ಯೋಗಿಗಳಿಗೆ ಪುತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂಗಳು ಮಾತ್ರ) ರಂತೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆ” ಯನ್ನು ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.

ಸಚಿವ ಸಂಪುಟದ ಅನುಮೋದನೆ ಜತೆ ಯೋಜನೆಯನ್ನು ಅನುಷ್ಠಾನಗೊಳಿಸಲು ಷರತ್ತು ಮತ್ತು ನಿಬಂಧನೆಗಳು, ಅನರ್ಹತೆಯ ಮಾನದಂಡಗಳನ್ನು ವಿಧಿಸಿ ಆದೇಶ ಹೊರಡಿಸಲು ಸರ್ಕಾರವು ತೀರ್ಮಾನಿಸಿದೆ

2023 ರ ವರ್ಷದಲ್ಲಿ ತೇರ್ಗಡೆಯಾಗಿ, ವೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪ್ರತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ) ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಭಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು “ಯುವ ನಿಧಿ ಯೋಜನೆ” ಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತು ಮತ್ತು ನಿಬಂಧನೆಗಳು:

  1. ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile
    of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
  2. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ.ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.

3, ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು,

  1. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಯೋಜನೆಗೆ ಅರ್ಹರಾಗದೇ ಇರುವವರು:-

  1. ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.

2, ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.

3, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.

  1. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.

ಈ ಆದೇಶವನ್ನು ಸಚಿವ ಸಂಪುಟದ ಅನುಮೋದನೆಯೊಂದಿಗೆ ಹೊರಡಿಸಲಾಗಿದೆ.

More News