Minister Chaluvarayaswamy: ಹಳದಿ ಎಲೆ ಹಾಗೂ ಎಲೆ ಚುಕ್ಕೆ ರೋಗ ನಿವಾರಣೆಗೆ ಸೂಕ್ತ ಕ್ರಮ: ಕೃಷಿ ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಸುವರ್ಣ ಸೌಧ, ಡಿ.13:(ಕರ್ನಾಟಕ ವಾರ್ತೆ): ಶಾಸಕ ಅರಗ ಜ್ಞಾನೇಂದ್ರ ಅವರು ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಮಾತನಾಡಿ, ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿನ ಪ್ರಮುಖ ಬೆಳೆಯಾಗಿರುವ ಅಡಿಕೆ ಬೆಳೆಗೆ ಕೆಲವು ತಿಂಗಳುಗಳಿAದ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗ ತಗಲುತ್ತಿದೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸಂಶೋಧನೆಗಾಗಿ ಸರ್ಕಾರ ನೀಡಿರುವ ಅನುದಾನ ಕಡಿಮೆ ಇದ್ದು, ಇನ್ನೂ ಹೆಚ್ಚಿನ ಅನುದಾನ ನೀಡಿ ರೋಗ ನಿವಾರಣೆಗೆ ಕ್ರಮವಹಿಸಬೇಕೆಂದು ಹೇಳಿದರು.
ಇದಕ್ಕೆ ಸದನದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಉತ್ತರಿಸಿ, ಅಡಿಕೆ ಬೆಳೆಗೆ ತಗಲುತ್ತಿರುವ ಎಲೆ ಚುಕ್ಕೆ ಹಾಗೂ ಹಳದಿ ಎಲೆ ರೋಗ ನಿವಾರಣೆಗಾಗಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧನೆ ಕೈಗೊಂಡಿದ್ದಾರೆ. ಈಗಾಗಲೇ ಈ ಸಂಶೋಧನಾ ಕಾರ್ಯಕ್ಕಾಗಿ 52 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಸಂಶೋಧನೆಗೆ ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಸರ್ಕಾರ ಬಿಡುಗಡೆ ಮಾಡಲು ಸಿದ್ಧವಿದೆ. ಈ ರೋಗಗಳ ನಿವಾರಣೆಗೆ ಸರ್ಕಾರ ಸೂಕ್ತ ಕ್ರಮವಹಿಸಿದೆ ಎಂದು ಅವರು ತಿಳಿಸಿದರು.

More News